Breaking News

KSIC ಮೈಸೂರ್ ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ.

Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

KSIC ಮೈಸೂರ್ ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ.

ಶಿವಮೊಗ್ಗ : ಕೆಎಸ್‍ಐಸಿ (ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ) ವತಿಯಿಂದ ಕರ್ನಾಟಕದ ಪಾರಂಪರಿಕ ಉತ್ಪನ್ನವಾದ ‘ಮೈಸೂರ್ ಸಿಲ್ಕ್’ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಇಂದಿನಿಂದ ಮಾ. 13 ರವರೆಗೆ ನಗರದ ಹಳೇ ತಾಲ್ಲೂಕು ಕಚೇರಿ ರಸ್ತೆಯ ಶ್ರೀ ವೀರಶೈವ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾರಾಟ ಮತ್ತು ಪ್ರದರ್ಶನವು ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆವರೆಗೆ ಇರಲಿದೆ.

ಕೆಎಸ್‍ಐಸಿ ಕರ್ನಾಟಕ ಸರ್ಕಾರದ ಒಂದು ಉದ್ಯಮವಾಗಿದ್ದು, ಇದು ಸಾಂಪ್ರದಾಯಿಕ ಮೈಸೂರು ಸೀರೆಗಳಲ್ಲದೆ ಈಗ ನಾಜೂಕಾದ ವಿನ್ಯಾಸದ ಸಂಗ್ರಹಿತ ‘ಕ್ರೇಪ್ ಡಿ ಚೈನ್’ ಸೀರೆಗಳನ್ನು ಹಾಗೂ ಜಾರ್ಜೆಟ್ ಮತ್ತು ಸಾದಾ ಮುದ್ರಿತ ಸೀರೆಗಳನ್ನು, ಟೈ, ಸ್ಕಾರ್ಫ್ ಇತ್ಯಾದಿ ಉತ್ಪನ್ನಗಳನ್ನು ಪ್ರದರ್ಶಿತಗೊಳಿಸುತ್ತಿದೆ. ಇದಲ್ಲದೆ, ನವನವೀನ ‘ವಿವಾಹ ಸಂಗ್ರಹ’ ಸೀರೆಗಳನ್ನು ಪರಿಚಯಿಸಲಾಗಿದೆ ಹಾಗೂ ಕೆಎಸ್‍ಐಸಿ ಯು ತನ್ನ ಉತ್ಪನ್ನಗಳ ಮೇಲೆ ಶೇ.25 ರವರೆಗೆ ರಿಯಾಯಿತಿಯನ್ನು ನೀಡುತ್ತಿದೆ.

ಭಾರತದಲ್ಲಿ ದೊರೆಯುವ ಇತರೆ ರೇಷ್ಮೆ ವಸ್ತ್ರಗಳಿಗಿಂತ ‘ಮೈಸೂರು ಸಿಲ್ಕ್ ವಿಭಿನ್ನವಾಗಿದೆ. ಇದು ಹಳೇ ಮೈಸೂರು ಪ್ರದೇಶದಲ್ಲಿ ದೊರೆಯುವ ಪ್ರಾಕೃತಿಕ ರೇಷ್ಮೆ ಗೂಡಿನಿಂದ ದೊರೆಯುವ ಅತ್ಯುತ್ತಮ ರೇಷ್ಮೆಯಿಂದ ಮಾಡಲ್ಪಟ್ಟಿದೆ. ಇದು ಬಟ್ಟೆಗಳಿಗೆ ವಿಶಿಷ್ಟವಾದ ಹೊಳಪು ಮತ್ತು ಭೌಗೋಳಿಕ ಸುವಾಸನೆಯನ್ನು ನೀಡುತ್ತದೆ. ಕೆಎಸ್‍ಐಸಿ ಮೈಸೂರು ಸಿಲ್ಕ್ ಸೀರೆಗಳು ಈಗಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಮಾರಾಟವಾಗುವ ಮತ್ತು ಬೇಡಿಕೆಯಲ್ಲಿರುವ ರೇಷ್ಮೆ ಸೀರೆಗಳಾಗಿವೆ.

ಮೈಸೂರ್ ಸಿಲ್ಕ್ ಸೀರೆಗಳ ಸಾಂಪ್ರದಾಯಿಕ ರೀತಿಯ ಉತ್ಪಾದನೆ, ಬಟ್ಟೆಯಲ್ಲಿ ಅಳವಡಿಸಲಾಗಿರುವ ಹುರಿ ಮಾಡುವ ವಿಧಾನ ಭಾರತದಲ್ಲಿ ದೊರೆಯುವ ಕ್ರೇಪ್ ಸಿಲ್ಕ್ ಬಟ್ಟೆಗಳಲ್ಲಿಯೇ ಅತ್ಯುತ್ತಮವಾಗಿರುವುದಲ್ಲದೇ ಬಟ್ಟೆಗೆ ವಿಶೇಷ ಮೆರಗನ್ನು ನೀಡಿದೆ. ಇದರಲ್ಲಿ ಉಪಯೋಗಿಸಲ್ಪಡುವ ರೇಷ್ಮೆಯು ಪರಿಶುದ್ದವಾಗಿದೆ ಹಾಗೂ ಜರಿಯು ಪರಿಶುದ್ದ ಚಿನ್ನದ್ದಾಗಿದ್ದು ಶೇ.0.65 ಚಿನ್ನ ಮತ್ತು ಶೇ.65 ರಷ್ಟು ಬೆಳ್ಳಿಯಿಂದ ತಯಾರಿಸಲ್ಪಟ್ಟಿದೆ.

ಇದನ್ನು ಒದಿ : https://cnewstv.in/?p=8924

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments