Breaking News

ಸ್ಮಾರ್ಟ್ ಸಿಟಿ : ನಾಮ ಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ – ಕರ್ನಾಟಕ ನಾಡು ರಕ್ಷಣಾ ವೇದಿಕೆ

Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸ್ಮಾರ್ಟ್ ಸಿಟಿ : ನಾಮ ಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ – ಕರ್ನಾಟಕ ನಾಡು ರಕ್ಷಣಾ ವೇದಿಕೆ.

ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸುತ್ತಿರುವ ನಾಮ ಫಲಕಗಳಲ್ಲಿ ಕನ್ನಡ ಭಾಷೆಗೆ
ಮೊದಲ ಆದ್ಯತೆ ನೀಡಿ ಪ್ರಚಾರ ಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿ ಪೂರ್ಣಗೊಂಡ ಸ್ಥಳಗಳಲ್ಲಿ ಹಾಗೂ ಶಿವಮೊಗ್ಗ ನಗರದ ಪ್ರಮುಖ ತಾಣಗಳಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸಿರುವ ನಾಮಫಲಕಗಳಲ್ಲಿ ಇಂಗ್ಲೀಷ್ ಭಾಷೆಗೆ ಮೊದಲ ಆದ್ಯತೆ ನೀಡಲಾಗಿದೆ. ನಂತರ ಕನ್ನಡ ಭಾಷೆಯಲ್ಲಿ ಬರೆಯಲಾಗಿದೆ.

ಶಿವಮೊಗ್ಗ ಸ್ಮಾರ್ಟ್ ಸಿಟಿ ನಡೆಯುವ ಎಲ್ಲ ಕಾಮಗಾರಿಯ ಹಾಗೂ ಪ್ರಮುಖ ತಾಣಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕು. ಎಲ್ಲ ಕಡೆಯಲ್ಲಿಯು ಅಳವಡಿಸುವ
ನಾಮಫಲಕಗಳಲ್ಲಿ ಮೇಲ್ಬಾಗದಲ್ಲಿ ಮೊದಲ ಆದ್ಯತೆಯಾಗಿ ಕನ್ನಡದಲ್ಲಿ ಬರೆಯಬೇಕು. ಕನ್ನಡ ಭಾಷೆಗೆ ಮೊದಲ ಪ್ರಾಮುಖ್ಯತೆ ನೀಡಬೇಕು ಎಂದು ಒತ್ತಾಯಿಸಲಾಯಿತು.

ಸ್ಮಾರ್ಟ್ ಸಿಟಿ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಪ್ರಾಮುಖ್ಯತೆ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು. ‌

ಈ ಸಂದರ್ಭದಲ್ಲಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಉಮೇಶ್ ಗೌಡ್ರು ಜಿಲ್ಲಾಧ್ಯಕ್ಷ ದಿನೇಶ್ ಎಸ್.ಎಂ., ಜಿಲ್ಲಾ ಗೌರವಾಧ್ಯಕ್ಷ ಮಲ್ಲೇಶ್‌ಕುಮಾರ್, ಜಿಲ್ಲಾ ಉಪಾಧ್ಯಕ್ಷ ಕುಬೇರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್, ಜಿಲ್ಲಾ ಸಹ ಕಾರ್ಯದರ್ಶಿ ಪ್ರವೀಣ್, ನಗರಾಧ್ಯಕ್ಷ
ಮಂಜುನಾಥ್.ಕೆ, ನಗರ ಉಪಾಧ್ಯಕ್ಷ ಮಂಜುನಾಥ್ ಎಸ್, ಯುವ ಘಟಕದ ಅಧ್ಯಕ್ಷ ಪ್ರದೀಪ್, ಉಪಾಧ್ಯಕ್ಷ ಶಶಾಂಕ್, ಪ್ರಧಾನ ಕಾರ್ಯದರ್ಶಿ ದಾಮೋದರ್, ತಾಲೂಕು, ಜಿಲ್ಲಾ
ಪದಾಧಿಕಾರಿಗಳು ಹಾಜರಿದ್ದರು.

ಇದನ್ನು ಒದಿ : https://cnewstv.in/?p=8931

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*