Breaking News

ಹೊಸ ದಾಖಲೆ ಬರೆದ ಬಿಜೆಪಿ ಯೋಗಿ ಸರ್ಕಾರ..

Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹೊಸ ದಾಖಲೆ ಬರೆದ ಬಿಜೆಪಿ ಯೋಗಿ ಸರ್ಕಾರ..

ನವದೆಹಲಿ : ಪಂಚರಾಜ್ಯ ಚುನಾವಣೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ಯೋಗಿ ಆದಿತ್ಯನಾಥ ಸರ್ಕಾರ ಹೊಸ ದಾಖಲೆಯನ್ನು ಬರೆದಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಉತ್ತರ ಪ್ರದೇಶದ ಒಟ್ಟು ವಿಧಾನಸಭಾ ಕ್ಷೇತ್ರಗಳ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಅಭ್ಯರ್ಥಿಯು ಜಯಗಳಿಸಿದ್ದಾರೆ.

ಯೋಗಿ ಆದಿತ್ಯನಾಥ್ ಹೊಸ ದಾಖಲೆ..

* 1950ರ ಬಳಿಕ ಇದೇ ಮೊದಲ ಬಾರಿಗೆ ಐದು ವರ್ಷಗಳ ಅಧಿಕಾರವಧಿಯನ್ನು ಪೂರ್ಣಗೊಳಿಸಿ ಯೋಗಿ ಆದಿತ್ಯನಾಥ್ ಮತ್ತೆ ಅಧಿಕಾರ ಉಳಿಸಿಕೊಂಡು ಗದ್ದುಗೆ ಏರಲಿದ್ದಾರೆ.

* 1985 ರ ನಂತರ ಇದೇ ಮೊದಲ ಬಾರಿಗೆ ಆಡಳಿತ ಪಕ್ಷವೇ ಚುನಾವಣೆಯಲ್ಲಿ ಗೆದ್ದು ಮತ್ತೆ ಎರಡನೇ ಬಾರಿ ಅಧಿಕಾರಕ್ಕೆ ಬರುತ್ತಿದೆ.

* ಉತ್ತರಪ್ರದೇಶದಲ್ಲಿ 37 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಬಹುಮತವನ್ನು ಗಳಿಸಿದ್ದು ಎರಡನೇ ಬಾರಿ ಅಧಿಕಾರ ಚುಕ್ಕಾಣಿಯನ್ನು ಹಿಡಿಯಲಿದೆ.

ಇದನ್ನು ಒದಿ : https://cnewstv.in/?p=8941

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*