Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ
ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ ಎಂದು ಸಿಂಗಟಗೆರೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ. ಹೆ.ಎಮ್. ರಾಜೇಶ್ ಹೇಳಿದ್ದಾರೆ.
ಅವರು ಇಂದು ಶಿವಮೊಗ್ಗದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ, ಕಡೂರು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಸಿಂಗಟಗೆರೆ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾದ ಜಲಶಕ್ತಿ ಅಭಿಯಾನ ಹಾಗೂ ಕೋವಿಡ್ ಲಸಿಕಾಕರಣ ಕುರಿತ ಜಾಗೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಬೇಕು. ಎಲ್ಲರೂ ಜಲಸಂರಕ್ಷಣೆಯ ಪಣತೊಟ್ಟಾಗ ಮಾತ್ರಾ ಜೀವಜಲದ ಸಂರಕ್ಷಣೆ ಸಾಧ್ಯ ಎಂದರು.
ಸಿಂಗಟಗೆರೆ ಗ್ರಾಮಪಂಚಾಯಿತಿ ಶ್ರೀ. ಸಿ. ಗಿರೀಶಾರಾಧ್ಯ ಮಾತನಾಡಿ, ಸರ್ಕಾರದ ಯೋಜನೆಗಳು ಗ್ರಾಮೀಣ ಜನರನ್ನು ತಲುಪುವಲ್ಲಿ ಜಾಗೃತಿ ಕಾರ್ಯಕ್ರಮಗಳು ಪರಿಣಾಮಕಾರಿ ಎಂದರು. ವೈದ್ಯಾಧಿಕಾರಿ ಡಾ. ರಂಗನಾಥ್ ಮಾತನಾಡಿ, ವೈಯುಕ್ತಿಕ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ಸಮಾಜದ ಸಮಗ್ರ ಆರೋಗ್ಯ ವೃದ್ಧಿ ಸಾಧ್ಯ ಎಂದರು.
ಕ್ಷೇತ್ರ ಪ್ರಚಾರ ಅಧಿಕಾರಿ ಶ್ರೀಮತಿ. ಅಕ್ಷತಾ ಸಿ.ಹೆಚ್, ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್.ಎಸ್.ರಮೇಶ್,ಶ್ರೀಮತಿ ಶಶಿಕಲಾ, ತಾಲ್ಲೂಕು ಆಶಾ ಮೇಲ್ವಿಚಾರಕಿ ಶ್ರೀಮತಿ.ತಾರಾದೇವಿ ಎನ್.ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಶಿವಮೊಗ್ಗದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಲಕ್ಮೀಕಾಂತ್ ಕಾರ್ಯಕ್ರಮ ನಿರೂಪಿಸಿದರು.
ಜಾಗೃತಿ ಅಭಿಯಾನದ ಅಂಗವಾಗಿ ಜಲಶಕ್ತಿ ಹಾಗೂ ಕೋವಿಡ್ ಲಸಿಕಾಕರಣದ ಕುರಿತು ರಂಗೋಲಿ ಹಾಗೂ ಆಶು ಭಾಷಣ ಸ್ಪರ್ಧೆ ಆಯೋಜಿಸಲಾಯಿತು.
ಇದನ್ನು ಒದಿ : https://cnewstv.in/?p=8954
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv