Breaking News

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿ.

Cnewstv.in / 11.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿ.

ನವದೆಹಲಿ : ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2024 ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ 2017ರಲ್ಲಿ ಗೆಲವು ಸಾಧಿಸಿದ್ದರಿಂದ 2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಸಾಧ್ಯವಾಗಿದೆ ಎಂದು ತಜ್ಙರು ಹೇಳಿದರು. ಅಂತೆಯೇ ಈ ಪಂಚರಾಜ್ಯಗಳ ಚುನಾವಣೆ ಫಲಿತಾಂಶ 2024ರ ಲೋಕಸಭಾ ಚುನಾವಣೆಯನ್ನು ನಿರ್ಧರಿಸಲಿದೆ ಎಂದು ತಜ್ಞರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಎಂದರು.

ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಖಂಡದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲಾಯಿತು.‌ ಬಿಜೆಪಿ ಪಂಜಾಬಿನಲ್ಲಿ ಸಹ ಮುಂದಿನ ದಿನಗಳಲ್ಲಿ ಬೆಳವಣಿಗೆಯಾಗುತ್ತದೆ. ಪಕ್ಷದ ಪರವಾಗಿ ಕಾರ್ಯನಿರ್ವಹಿಸಿದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದರು

ಇದನ್ನು ಒದಿ : https://cnewstv.in/?p=8954

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*