Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
@ಸಹ್ಯಾದ್ರಿಕಾಲೇಜ್ ಹಾಸ್ಟೆಲ್
ಸಹ್ಯಾದ್ರಿ ಕಾಲೇಜ್ ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು, 27 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು.
ಶಿವಮೊಗ್ಗ : ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ವಾಂತಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಾಸ್ಟೆಲ್ ನಲ್ಲಿ ನಿನ್ನೆ ಮಧ್ಯಾಹ್ನ ಊಟ ಮಾಡಿದ 27 ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿದ್ದು ಸಂಜೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಸ್ತುತ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಅಸ್ವಸ್ಥ ವಿದ್ಯಾರ್ಥಿನಿಯರ ಆರೋಗ್ಯವನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಈ. ಕಾಂತೇಶ್ ಹಾಗೂ ಕುವೆಂಪು ವಿ.ವಿ ಸಿಂಡಿಕೇಟ್ ಸಂತೋಷ್ ಬಳ್ಳಕೆರೆ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.
ಇದನ್ನು ಒದಿ : https://cnewstv.in/?p=8962
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv