Breaking News

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ.

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ.

ಶಿವಮೊಗ್ಗ : ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 13/03/2021 ರ ಭಾನುವಾರದಂದು 2021-22 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಸೀಗೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ, ಗೋಪಾಳ 100 ಅಡಿ ರಸ್ತೆ, ಮೋರ್ ಎದುರು, ಕೋಟೆ ರಸ್ತೆ ಅರಮನೆ ಎದುರು, ಪದ್ಮಾ ಟಾಕೀಸ್ ಎದುರು ಗೋಪಾಳ ಮುಖ್ಯರಸ್ತೆ, ಶಿವನ ಪಾರ್ಕ್ ಹತ್ತಿರ ಸಿದ್ದೇಶ್ವರನಗರ” ಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.

ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=8966

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*