Breaking News

ಜಮ್ಮು ಮತ್ತು ಕಾಶ್ಮೀರ : ನಾಲ್ವರು ಉಗ್ರರ ಎನ್ಕೌಂಟರ್..

Cnewstv.in / 12.03.2022 / ಜಮ್ಮು-ಕಾಶ್ಮೀರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಮ್ಮು ಮತ್ತು ಕಾಶ್ಮೀರ : ನಾಲ್ವರು ಉಗ್ರರ ಎನ್ಕೌಂಟರ್..

ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಯವರು ಎನ್ಕೌಂಟರ್ ಮಾಡಿ, ನಾಲ್ವರು ಉಗ್ರರರನ್ನು ಹೊಡೆದುರುಳಿಸಿದ್ದಾರೆ.

ಪ್ರತ್ಯೇಕ ಮೂರು ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀಲರ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ ಎನ್ಕೌಂಟರ್ ನಡೆಸಲಾಗಿದೆ.

ರಾತ್ರಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಹಾಗೂ ಇಂದು ಬೆಳಿಗ್ಗೆ ನಡೆಸಲಾದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾಗಿರುವ ನಾಲ್ವರು ಉಗ್ರರ ಪೈಕಿ ಇಬ್ಬರು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್, ಮತ್ತಿಬ್ಬರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಒದಿ : https://cnewstv.in/?p=8975

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*