Cnewstv.in / 12.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ.
ಬೆಂಗಳೂರು : ಶಾಲಾ ಆವರಣದಲ್ಲಿಯೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಲಾಗಿದೆ.
ಜೀವನ್ ಬಿಮಾ ನಗರ ಠಾಣೆಯಲ್ಲಿ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ತಾಯಿ 2014 ರಲ್ಲಿ ದೂರು ನೀಡಿದ್ದು, ದೂರಿನ ಅನ್ವಯ ಪೊಲೀಸರು ಐಪಿಸಿ ಸೆಕ್ಷನ್ 376 ಹಾಗೂ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.
ನಂತರ ಪೊಲೀಸರು ಶಿಕ್ಷಕರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಶಿಕ್ಷಕನು ಮಧ್ಯಾಹ್ನ ಬಾಲಕಿಯನ್ನು ಊಟದ ಸಮಯದಲ್ಲಿ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದು ಬೆಳಕಿಗೆ ಬಂದಿದೆ.
ಇದನ್ನು ಒದಿ : https://cnewstv.in/?p=8986
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv