Breaking News

Hijab Case : ಮಹತ್ವದ ಹಿಸಾಬ್ ತೀರ್ಪು ನಾಳೆ ಪ್ರಕಟ.

Cnewstv.in / 14.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

#HijabCase #ಕರ್ನಾಟಕ ಹೈಕೋರ್ಟ್

Hijab Case : ಮಹತ್ವದ ಹಿಸಾಬ್ ತೀರ್ಪು ನಾಳೆ ಪ್ರಕಟ.

ಬೆಂಗಳೂರು : ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ನಾಳೆ ನೀಡಲಿದೆ.

ಕಳೆದ ಎರಡು ಮೂರು ತಿಂಗಳಿನಿಂದ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಜಾಬ್ ವಿವಾದಕ್ಕೆ ನಾಳೆ ಪೂರ್ಣವಿರಾಮ ಬೀಳುವ ಸಾಧ್ಯತೆ ಇದೆ. ಬೆಳಗ್ಗೆ 10.30 ರ ಸಮಯಕ್ಕೆ ತೀರ್ಪು ಪ್ರಕಟವಾಗಲಿದೆ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿಚಾರಣೆಯನ್ನು ಪೂರ್ಣಗೊಳಿಸಿರುವ ತ್ರಿಸದಸ್ಯ ನ್ಯಾಯಪೀಠ ನಾಳೆ ತೀರ್ಪನ್ನು ನೀಡಲಿದೆ.

ಉಡುಪಿಯ ಸರಕಾರಿ ಬಾಲಕಿಯ ಪಿಯು ಕಾಲೇಜಿನಲ್ಲಿ ಹಿಜಾಬ್ ನಿಬಂಧಿಸಿರುವುದನ್ನು ಪ್ರಶ್ನಿಸಿ ಕಾಲೇಜಿನ 5 ವಿದ್ಯಾರ್ಥಿನಿಯರು ಹಾಗೂ ಕುಂದಾಪುರದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಅರ್ಜಿಯನ್ನು ಸಲ್ಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಕೆಯಾಗಿದ್ದ 10 ಕ್ಕೂ ಹೆಚ್ಚು ಮುಖ್ಯ ಅರ್ಜಿಗಳು, 25ಕ್ಕೂ ಹೆಚ್ಚು ಮಧ್ಯಂತರಗಳನ್ನು ಅರ್ಜಿಗಳನ್ನು ಸತತವಾಗಿ 11 ದಿನಗಳ ಕಾಲ 25 ಗಿಂತಲೂ ಹೆಚ್ಚು ಸಮಯ ಹೈಕೋರ್ಟ್ ವಿಚಾರಣೆ ನಡೆಸಿತ್ತು.‌

ಇದನ್ನು ಒದಿ : https://cnewstv.in/?p=9012

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*