Breaking News

ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಿಕೆ

Cnewstv.in / 14.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಿಕೆ

ಶಿವಮೊಗ್ಗ : ಹಿಜಾಬ್ ವಿಚಾರ ಕುರಿತು ಹೈಕೋರ್ಟ್ ಮಹತ್ವದ ತೀರ್ಪನ್ನು ನಾಳೆ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಅರ್ ಸೆಲ್ವಮಣಿ ಯವರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು.

ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಆಯ್ಕೆಯ ಪರೀಕ್ಷೆಗಳು‌ ಮೊದಲೇ ನಿಗದಿಯಾದಂತೆ ಮೂರೂ ಕೇಂದ್ರಗಳಲ್ಲಿ ( ಶಿವಮೊಗ್ಗದ ಹೆಚ್.ಎಸ್.ಆರ್ ಪದವಿ ಪೂರ್ವ ಕಾಲೇಜು, ಸರಕಾರಿ ಪಪೂ ಕಾಲೇಜು, ಸರಕಾರಿ ಬಾಲಿಕಾ ಪಪೂ‌ಕಾಲೇಜು,) ಮಂಗಳವಾರ ನಡೆಯಲಿವೆ.

ಇದನ್ನು ಒದಿ : https://cnewstv.in/?p=9016

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*