Cnewstv.in / 15.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಿಜಾಬ್ ಮಹತ್ವದ ತೀರ್ಪು : ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್.
ಬೆಂಗಳೂರು : ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪನ್ನು ನೀಡಿದೆ.
ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ತೀರ್ಪು ನೀಡಿದೆ.
ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಸೇರಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.
ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರವನ್ನು ಸರ್ಕಾರ ಕಡ್ಡಾಯಗೊಳಿಸುವುದು ಕಾರಣಬದ್ಧ ನಿರ್ಬಂಧವಾಗಿದ್ದು ಅದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಲು ಸಾಧ್ಯವಿಲ್ಲ. ನಿರ್ದಿಷ್ಟ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸುವ ಅಧಿಕಾರ ಸರ್ಕಾರಕ್ಕಿದೆ ಎಂದು ಹೈಕೋರ್ಟ್ ಹೇಳಿದೆ.
ಹೈಕೋರ್ಟ್ ನೀಡಿವ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.
ಇದನ್ನು ಒದಿ : https://cnewstv.in/?p=9020
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv