Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬಂಧಿಗಳ ಸಂದರ್ಶನ ಪುನರಾರಂಭ.
ಶಿವಮೊಗ್ಗ : ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಮುಖವಾಗಿರುವುದರಿಂದ ಶಿವಮೊಗ್ಗ ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಬಂಧಿಗಳಿಗೆ ಮಾ.21 ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗಿದೆ.
ಕೋವಿಡ್ ಮಾರ್ಗಸೂಚಿಗಳನ್ವಯ ಮುಂಜಾಗೃತಾ ಕ್ರಮವಾಗಿ ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ನಿಗದಿತ ಸಂದರ್ಶನವನ್ನು ಮಾತ್ರ ನೀಡಲಾಗುವುದು. ಆದ್ದರಿಂದ ಬಂಧಿಗಳ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ವಕೀಲರು ಮುಂಚಿತವಾಗಿಯೇ ಕಾರಾಗೃಹದ ಮುಖ್ಯಸ್ಥ ಶಿವಾನಂದ ಆರ್.ಶಿವಪುರ, ದೂರವಾಣಿ ಸಂಖ್ಯೆ: 08182-295144, 295155, ಸಿಯುಜಿ ಮೊ.ಸಂ: 9480806420, 9480806421 ಹಾಗೂ ಕಾರಾಗೃಹದ ಇಮೇಲ್ ವಿಳಾಸ cpwsmg.prisons@ka.gov.in ಇಲ್ಲಿ ಇಮೇಲ್, ವಾಟ್ಸಾಪ್ ಅಥವಾ ದೂರವಾಣಿ ಮುಖಾಂತರ ಸಂಪರ್ಕಿಸಿ ವಿವರಗಳೊಂದಿಗೆ ಸಂದರ್ಶನಕ್ಕೆ ನೊಂದಾಯಿಸಿ, ನಿಗದಿಪಡಿಸಿದ ದಿನ ಮತ್ತು ಸಮಯಕ್ಕೆ ಸಂದರ್ಶನಕ್ಕೆ ಆಗಮಿಸಬೇಕು.
ಸಂದರ್ಶನಕ್ಕೆ ಬರುವ ಸಂದರ್ಶಕರು ಯಾವುದೇ ರೀತಿಯ ಕೋವಿಡ್ ಲಕ್ಷಣಗಳನ್ನು ಹೊಂದಿರಬಾರದು. ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಕುರಿತು ಲಸಿಕಾ ಪ್ರಮಾಣ ಪತ್ರ ಹಾಜರುಪಡಿಸಬೇಕು. ಸಂದರ್ಶಕರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಮಹಿಳಾ ಕೇಂದ್ರ ಕಾರಾಗೃಹ ಅಧೀಕ್ಷಕ ಶಿವಾನಂದ ಆರ್.ಶಿವಾಪುರ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=9035
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments