Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕಾರ್ಬಿವ್ಯಾಕ್ಸ್ ಲಸಿಕೆ : 12 ರಿಂದ 14 ವರ್ಷದೊಳಗಿನ ಅರ್ಹ ಮಕ್ಕಳೆಲ್ಲ್ಲ ಕೋವಿಡ್ ಲಸಿಕೆ ಪಡೆದುಕೊಳ್ಖಿ – ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ..
ಶಿವಮೊಗ್ಗ : ಯಶಸ್ವೀ ಕೋವಿಡ್ ಲಸಿಕಾರಣದಿಂದಾಗಿ ಮೂರನೇ ಅಲೆಯನ್ನು ನಾವು ಸುಲಭವಾಗಿ ಎದುರಿಸಲು ಸಾಧ್ಯವಾಯಿತು. ಆದ್ದರಿಂದ ಎಲ್ಲ 12 ರಿಂದ 14 ವರ್ಷದೊಳಗಿನ ಮಕ್ಕಳು ಕಾರ್ಬಿವ್ಯಾಕ್ಸ್ ಲಸಿಕೆ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಹೇಳಿದರು.
12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮತ್ತು 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 12 ರಿಂದ 14 ವರ್ಷದೊಳಗಿನ 64,387 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಪ್ರಸ್ತುತ 40 ಸಾವಿರ ಕಾರ್ಬಿವ್ಯಾಕ್ಸ್ ಲಸಿಕೆ ಇದ್ದು ಲಸಿಕೆ ನೀಡಲು ಮೈಕ್ರೊಪ್ಲಾನ್ ತಯಾರಿಸಲಾಗಿದೆ ಎಂದರು.
ಕೋವಿಡ್‍ನ ಮೊದಲ ಎರಡು ಅಲೆಗಳು ಭೀಕರವಾಗಿದ್ದವು. ಆಗ ಲಸಿಕೆ ಇಲ್ಲದ ಕಾರಣ ಅನೇಕ ಅವಘಡಗಳು ಸಂಭವಿಸಿದವು. ಆದರೆ ಮೂರನೇ ಅಲೆಯಲ್ಲಿ ಅಂತಹ ಅಪಾಯಗಳು ಕಾಣಲಿಲ್ಲ. ಇದಕ್ಕೆ ಕಾರಣ ಕೋವಿಡ್ ಲಸಿಕೆ. ಪ್ರಧಾನಮಂತ್ರಿಯವರು 2021 ರ ಜ.16 ರಂದು ಲಸಿಕಾಕರಣಕ್ಕೆ ಚಾಲನೆ ನೀಡಿದರು. ಶಿವಮೊಗ್ಗದಲ್ಲಿ 09 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತೆಯರಿಗೆ ಲಸಿಕೆ ಪ್ರಾರಂಭಿಸಲಾಯಿತು.
ನಂತರ ಮುಂಚೂಣಿ ಕಾರ್ಯಕರ್ತರಿಗೆ, ಆನಂತರ 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರೀಕರಿಗೆ ಲಸಿಕೆ ನೀಡಲು ಪ್ರಾರಂಭಿಸಲಾಯಿತು. 2021 ರ ಏಪ್ರಿಲ್ 1 ರಿಂದ ಎಲ್ಲ 45 ವರ್ಷ ಮೇಲ್ಪಟ್ಟ ನಾಗರೀಕರಿಗೆ ಲಸಿಕೆ ನೀಡಲಾರಂಭಿಸಲಾಯಿತು. 2021 ರ ಜೂನ್ 27 ರಿಂದ ಎಲ್ಲ ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಲಸಿಕೆ ಆರಂಭಿಸಲಾಯಿತು. 2022 ರ ಜ.03 ರಿಂದ 15 ರಿಂದ 17 ವರ್ಷದ ವಿದ್ಯಾರ್ಥಿಗಳಿಗೆ ಹಾಗೂ ಇಂದಿನಿಂದ 12 ರಿಂದ 14 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಮುನ್ನೆಚ್ಚರಿಕಾ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಅರ್ಹರೆಲ್ಲರೂ ಈ ಲಸಿಕೆಯನ್ನು ಪಡೆಯಬೇಕೆಂದು ಕರೆ ನೀಡಿದರು.
ಇದನ್ನು ಒದಿ : https://cnewstv.in/?p=9045
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv