Breaking News

ಜಪಾನ್ ನಲ್ಲಿ ಭಾರೀ ಭೂಕಂಪ..

Cnewstv.in / 17.03.2022 / ಜಪಾನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಪಾನ್ ನಲ್ಲಿ ಭಾರೀ ಭೂಕಂಪ..

ಟೋಕಿಯೋ : ಜಪಾನ್ ನಲ್ಲಿ ಭಾರಿ ಭೂಕಂಪವಾಗಿದ್ದು, ಭೂಕಂಪದಿಂದಾಗಿ 4 ಮಂದಿ ಮೃತಪಟ್ಟಿದ್ದು, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಜಪಾನ್ ದೇಶದ ಪೂರ್ವ ಮತ್ತು ಈಶಾನ್ಯ ಭಾಗಗಳಲ್ಲಿ ಹೆಚ್ಚಾಗಿ ಭೂಮಿ ಕಂಪಿಸಿದ ಅನುಭವವಾಗಿದೆ. ಉತ್ತರ ಅಕ್ಷಾಂಶ 37.7 ಮತ್ತು ಪೂರ್ವ ರೇಖಾಂಶ 141.7ರ 60 ಕಿಮೀ ಆಳದಲ್ಲಿ, ಬುಧವಾರ ಸ್ಥಳೀಯ ಕಾಲಮಾನ ರಾತ್ರಿ 11.36ರ ಸುಮಾರಿಗೆ ಕಂಪನ ಸಂಭವಿಸಿದೆ.

ಭೂಕಂಪದಿಂದಾಗಿ ಜಪಾನ್ ನಾ ಅನೇಕ ನಗರಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು, ಜನರು ಕತ್ತಲಲ್ಲೇ ಕಾಲಕಳೆಯುವಂತಾಗಿದೆ.

ಭೂಕಂಪದ ತೀವ್ರತೆಯಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಉಂಟಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಬರೋಬ್ಬರಿ ಒಂದು ಅಡಿ ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕರಾವಳಿ ತೀರ ಪ್ರದೇಶದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನು ಒದಿ : https://cnewstv.in/?p=9060

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*