Cnewstv.in / 20.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬಂಜಾರ ಮಹಿಳಾ ತರಬೇತಿ ಹಾಗೂ ವಸತಿ ನಿಲಯದ ಉದ್ಘಾಟನೆ.
ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಹಾಗೂ ಶಿವಮೊಗ್ಗ ಜಿಲ್ಲಾ ಬಂಜಾರ ಮಹಿಳಾ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಮಹಿಳಾ ತರಬೇತಿ ಹಾಗೂ ವಸತಿ ನಿಲಯದ ಉದ್ಘಾಟನಾ ಸಮಾರಂಭವನ್ನು ಇಂದು ಬೆಳಗ್ಗೆ ಜಯನಗರದ ರಸ್ತೆಯ ರೆಡ್ಡಿ ಬಡಾವಣೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಸಿ.ನಾರಾಯಣಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸಚಿವರಾದ ಕೆ.ಎಸ್.ಈಶ್ವರಪ್ಪ, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಕುಡುಚಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಕರ್ನಾಟಕ ತಾಂಡ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಅಭಿವೃದ್ದಿ ಅಧಿಕಾರಿಗಳು, ಇತರೆ ಅಧಿಕಾರಿಗಳು, ಜಿಲ್ಲಾ ಬಂಜಾರ ಮಹಿಳಾ ಸೇವಾ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಇದನ್ನು ಒದಿ : https://cnewstv.in/?p=9098
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments