Breaking News

ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸಚಿವ ಡಾ.ನಾರಾಯಣ ಗೌಡ

Cnewstv.in / 20.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸಚಿವ ಡಾ.ನಾರಾಯಣ ಗೌಡ.

ಶಿವಮೊಗ್ಗ : ಹೊಳೆಹೊನ್ನೂರಿನಲ್ಲಿರುವ 30ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನು 50 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು.

ಇಂದು ಹೊಳೆಹೊನ್ನೂರಿನಲ್ಲಿ 30 ಹಾಸಿಗೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಹಾಗೂ ಸಿಬ್ಬಂದಿಗಳ ವಸತಿಗೃಹಗಳನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಜಿಲ್ಲೆಯಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಉನ್ನತೀಕರಿಸಲಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳು ಉಂಟಾಗಿವೆ. ಪ್ರಸ್ತುತ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಗಳ ಸೌಲಭ್ಯವಿದ್ದು, ಇನ್ನು 30ಲಕ್ಷ ರೂ. ವೆಚ್ಚ ಮಾಡಿ 50ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನು ಒದಿ : https://cnewstv.in/?p=9100

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*