Cnewstv.in / 21.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ಧತೆ.
ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದೆ.
ಇಡೀ ರಾಜ್ಯದ ಗಮನ ಸೆಳೆದಿರುವ ಪ್ರಸಿದ್ಧ ಹಬ್ಬಗಳಲ್ಲೊಂದಾದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುತ್ತದೆ. ಶಿವಮೊಗ್ಗ ನಗರದ ಜನ ಸಡಗರ-ಸಂಭ್ರಮ, ಭಕ್ತಿಯಿಂದ ಆಚರಿಸುವ ಹಬ್ಬ.
ಮಾರಿಕಾಂಬಾ ದೇವಿಯ ಮೂಲಸ್ಥಾನ ಅಥವಾ ತವರುಮನೆ ಎಂದು ಕರೆಯುವ ಗಾಂಧಿಬಜಾರ್ ನಲ್ಲಿ ಹಬ್ಬದ ವಾತಾವರಣ ಕಳೆಕಟ್ಟಿದೆ. ತೋರಣ, ಹೂವಿನಿಂದ ಅಲಂಕರಿಸಲಾಗುತ್ತದೆ. ಗಾಂಧಿಬಜಾರ್ ನಿಂದ ಶಿವಪ್ಪನಾಯಕನ ವೃತ್ತದವರೆಗೂ ಭಕ್ತರಿಗೆ ನೆರಳಿಗಾಗಿ ಶಾಮಿಯಾನದ ವ್ಯವಸ್ಥೆ ಮಾಡಲಾಗಿದೆ.
ದೇವಿಯ ದರ್ಶನಕ್ಕೆ ಪ್ರತಿಯೊಬ್ಬ ಭಕ್ತರಿಗೂ ಅವಕಾಶ ದೊರೆಯುವಂತೆ ಸುಸಜ್ಜಿತವಾದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಹಾಗೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=9103
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.