Breaking News

ಆನಂದಪುರ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು.

Cnewstv.in / 23.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಆನಂದಪುರ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು.

ಶಿವಮೊಗ್ಗ : ಆನಂದಪುರ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಲಗುಂಡಿಯ ಮೆಣಸಿನ ಸರ ಬಳಿ KA 19 ME 932 ನೋಂದಣಿಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ಕಾರಿನ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗದಿಂದ ಸಾಗರ ಕಡೆ ಹೊರಟಿದ್ದ ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದರು. ಎದುರು ಭಾಗದಲ್ಲಿ ಯಾವುದೋ ಗಾಡಿ ಬಂದಿರುವ ಹಿನ್ನೆಲೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆಯಿಂದ ಹತ್ತು ಅಡಿ ದೂರದಲ್ಲಿದ್ದ ವಿದ್ಯುತ್ ಕಂಬಕ್ಕೆ ಕೂಡ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಕಾರಿನಲ್ಲಿದ್ದ ಮೃತ ದೇಹವನ್ನು ಹೊರ ತೆಗೆಯಲು ಸಾಗರದ ಶ್ರಿ ಆಂಬುಲೆನ್ಸ್ ಮಾಲೀಕ ಹಾಗೂ ಹೈವೇ ಪೆಟ್ರೋಲ್ ಸಿಬ್ಬಂದಿಗಳು ಮತ್ತು ಗ್ರಾಮಸ್ಥರ ನೆರವಿನಿಂದ ಹರಸಾಹಸ ಪಡಬೇಕಾಯಿತು. ಮೃತ ದೇಹವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಉಳಿದವರನ್ನು ಚಿಕಿತ್ಸೆಗಾಗಿ 108 ರಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ‌

ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಇದನ್ನು ಒದಿ : https://cnewstv.in/?p=9134

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*