Breaking News

ದೇಶದಲ್ಲಿ ಕೊರೊನಾ ಮೂರನೇ ಅಲೆ ಅಂತ್ಯದತ್ತ. ಒಟ್ಟು ಸಕ್ರಿಯ ಪ್ರಕರಣಗಳು ಎಷ್ಟು ಗೊತ್ತಾ??

Cnewstv.in / 24.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ದೇಶದಲ್ಲಿ ಕೊರೊನಾ ಮೂರನೇ ಅಲೆ ಅಂತ್ಯದತ್ತ. ಒಟ್ಟು ಸಕ್ರಿಯ ಪ್ರಕರಣಗಳು ಎಷ್ಟು ಗೊತ್ತಾ ?

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ದೇಶದಲ್ಲಿ ಕೊರೊನಾ ಮೂರನೇ ಅಲೆ ಅಂತ್ಯದತ್ತ ಸಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,938 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5,16,672 ಇದೆ.

ಕಳೆದ 24 ಗಂಟೆಯಲ್ಲಿ 2,531 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 4,24,75,588 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 4,17,60,458 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 1,81,89,15,234 ಜನರಿಗೆ ಲಸಿಕೆ ನೀಡಲಾಗಿದೆ.

ಇದನ್ನು ಒದಿ : https://cnewstv.in/?p=9139

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*