Cnewstv.in / 24.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ಬಸ್ ನಿಲ್ದಾಣನಲ್ಲಿ ಮುಂದುವರೆದ ಲಾಪ್ ಟಾಪ್ ಕಳ್ಳತನ..
ಶಿವಮೊಗ್ಗ : ನಗರದ KSTTC ಬಸ್ ನಿಲ್ದಾಣದಲ್ಲಿ ಲ್ಯಾಪ್ ಟಾಪ್ ಕಳ್ಳತನವಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಾಗಲಕೋಟೆ ಮೂಲದ ವಿದ್ಯಾರ್ಥಿನಿಯೊಬ್ಬರು ಚಿಕ್ಕಮಂಗಳೂರಿಗೆ ಹೋಗಬೇಕಿದ್ದು, ಈ ಮಧ್ಯೆ ಇಂದು ಬೆಳಿಗ್ಗೆ ಜಾವ ಶಿವಮೊಗ್ಗದ KSRTC ಬಸ್ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನಂತರ ಬಸ್ಸಿನ ನಿರ್ವಾಹಕರಿಗೆ ತಿಳಿಸಿ
ಶೌಚಾಲಯಕ್ಕೆ ಹೋಗಿ ಬರುವುದರಲ್ಲಿ ಲ್ಯಾಪ್ ಟಾಪ್ ಕಳ್ಳತನವಾಗಿದೆ.
ಅಲ್ಲದೆ ಲ್ಯಾಪ್ ಟಾಪ್ ಬ್ಯಾಗಿನಲ್ಲಿದ್ದ ವೋಟರ್ ಐಡಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಹಾಗೂ 11 ಸಾವಿರ ರೂಪಾಯಿ ನಗದು ಕೂಡ ಕಳ್ಳತನವಾಗಿದೆ. ಈ ಸಂಬಂಧ ವಿದ್ಯಾರ್ಥಿನಿಯು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶಿವಮೊಗ್ಗದ KSRTC ಬಸ್ ನಿಲ್ದಾಣದಲ್ಲಿ ಇತ್ತೀಚೆಗೆ ಲ್ಯಾಪ್ ಟಾಪ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದೆ. ಒಂದೇ ತಿಂಗಳಿನಲ್ಲಿ ಲಾಪ್ ಟಾಪ್ ಕಳ್ಳತನದ 3 ಘಟನೆಗಳು ಬೆಳಕಿಗೆ ಬಂದಿದೆ.
ಇದನ್ನು ಒದಿ : https://cnewstv.in/?p=9139
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv