Cnewstv.in / 26.03.2022 / ಗುಜರಾತ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಬರಮತಿ ಆಶ್ರಮ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾತ್ಮಗಾಂಧೀಜಿ ಮರಿ ಮೊಮ್ಮಗ..??
ನವದೆಹಲಿ : ಸಬರಮತಿ ಆಶ್ರಮದ ಪುನರಾಭಿವೃದ್ಧಿ ವಿರುದ್ಧ ಮಹಾತ್ಮಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸಬರಮತಿ ಆಶ್ರಮ ಒಂದು ಎಕರೆ ವಿಸ್ತೀರ್ಣದಲ್ಲಿ, ಅದರ ಸುತ್ತಲಿನ ಭೂಮಿಯನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿರುವ ಗುಜರಾತ್ ಸರ್ಕಾರದ ಕ್ರಮವನ್ನು ವಿರೋಧಿಸಿ ಹಿರಿಯ ವಕೀಲ ಇಂದಿರಾ ಜೈಸಿಂಗ್ ಮೂಲಕ ದಾವೆ ಹುಡಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ವರ್ಚುವಲ್ ವಿಚಾರಣೆ ನಡೆಸಬೇಕೆಂದು ಹಿರಿಯ ವಕೀಲ ಇಂದಿರಾ ಜೈಸಿಂಗ್ ಅವರು ಮುಖ್ಯ ನ್ಯಾಯಮೂರ್ತಿ ಎಂ ವಿ ರಮನ್, ಕೃಷ್ಣ ಮುರಾರಿ ಮತ್ತು ಸಿ.ಟಿ ರವಿ ಕುಮಾರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠಕ್ಕೆ ಮನವಿ ಮಾಡಿದ್ದಾರೆ.
ಪುನರ್ ಅಭಿವೃದ್ಧಿ ಯೋಜನೆಯು ಸಬರಮತಿ ಆಶ್ರಮದ ಭೌತಿಕ ರಚನೆಯನ್ನ ಬದಲಾಯಿಸುತ್ತದೆ ಮತ್ತು ಗಾಂಧೀಜಿಯವರ ಸಿದ್ಧಾಂತವನ್ನು ಒಳಗೊಂಡಿರುವ ಅದರ ಮೂಲ ಸರಳಯನ್ನು ಭ್ರಷ್ಟ ಗೊಳಿಸುತ್ತದೆ. ಆಶ್ರಮವು ಗಾಂಧಿ ತತ್ವವನ್ನು ಕಳೆದುಕೊಳ್ಳಬಹುದು ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನು ಒದಿ : https://cnewstv.in/?p=9162
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments