Cnewstv.in / 28.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಇಂದಿನಿಂದ SSLC ಪರೀಕ್ಷೆ ಆರಂಭ..ಸಮವಸ್ತ್ರ ಕಡ್ಡಾಯ ನಿಯಮ ಪಾಲಿಸಿದ ವಿದ್ಯಾರ್ಥಿಗಳು…
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆಗಳು ಆರಂಭವಾಗಿದೆ.
ಇಂದಿನಿಂದ ಏಪ್ರಿಲ್ 11 ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ. ರಾಜ್ಯದ 15,387 ಶಾಲೆಗಳಲ್ಲಿ ಸುಮಾರು 8.74 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು 3,444 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರ ಸಕಲ ಸಿದ್ಧತೆಯನ್ನು ನಡೆಸಿದೆ. ಒಟ್ಟು 3,444 ಮುಖ್ಯ ಅಧಿಕ್ಷಕರು ಹಾಗೂ 49,817 ಕೊಠಡಿ ಮೇಲ್ವಿಚಾರಕರ ಪರೀಕ್ಷೆಗಾಗಿ ನಿಯೋಜನೆ ಮಾಡಲಾಗಿದೆ.
ಸಮವಸ್ತ್ರ ಕಡ್ಡಾಯ ನಿಯಮ ಪಾಲಿಸಿದ ವಿದ್ಯಾರ್ಥಿಗಳು…
ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಎಂದು ಶಿಕ್ಷಣ ಇಲಾಖೆ ಸ್ಪಷ್ಟವಾಗಿ ತಿಳಿಸಲಾಗಿತ್ತು ಈ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿರಲಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಹಿಜಾಬ್, ಬುರ್ಖಾ ಧರಿಸದೆ ಪರೀಕ್ಷಾ ಕೊಠಡಿಗೆ ತೆರಳಿದ್ದಾರೆ.
ಇದನ್ನು ಒದಿ : https://cnewstv.in/?p=9173
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments