Cnewstv.in / 28.03.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
SSLC ಪರೀಕ್ಷೆಗೆ ಹಾಜರಾಗಿದ್ದ 6 ನಕಲಿ ಅಭ್ಯರ್ಥಿಗಳ ಬಂಧನ.
ಬೆಳಗಾವಿ : ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆಗಳು ಆರಂಭವಾಗಿದ್ದು, ಅಸಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಹಾಜರಾಗಿದ್ದ ನಕಲಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ.
ಬೆಳಗಾವಿಯ ಚಿಕ್ಕೋಡಿಯ R D ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ನಕಲಿ ಅಭ್ಯರ್ಥಿಗಳು SSLC ಪರೀಕ್ಷೆ ಬರೆಯಲು ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಅಧಿಕಾರಿಗಳು ಹಾಲ್ ಟಿಕೇಟ್ ಪರಿಶೀಲಿಸಿದಾಗ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಅಧಿಕಾರಿಗಳು 6 ಜನ ನಕಲಿ ಅಭ್ಯರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಧಿತರನ್ನು ಕಾರ್ತಿಕ್ ಕುಂಬಾರ, ಸಿದ್ದು ಜೋಗಿ,
ರಾಹುಲ್ ಕಿಲ್ಲಿಕೇಟರ್, ಕೊಂಕಣಿವಾಡಿಯ ಭೀಮಶಿ ಹುಲಿಕುಂದ, ಮಹಾಂತೇಶ್ ಹಾಗೂ ಸವಿತಾ ಹೊಸೂರು ಗುರುತಿಸಲಾಗಿದೆ.
ಇದನ್ನು ಒದಿ : https://cnewstv.in/?p=9179
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments