Breaking News

ಸಿಎಂ ಇಬ್ರಾಹಿಂ ರಾಜೀನಾಮೆ ಅಂಗೀಕರಿಸಿದ ಸಭಾಪತಿ.

Cnewstv.in / 31.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಿಎಂ ಇಬ್ರಾಹಿಂ ರಾಜೀನಾಮೆ ಅಂಗೀಕರಿಸಿದ ಸಭಾಪತಿ.

ಬೆಂಗಳೂರು : ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ ಇಬ್ರಾಹಿಂ ಅವರ ರಾಜೀನಾಮೆಯನ್ನು ಸಭಾಪತಿಗಳು ಅಂಗೀಕರಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಇಬ್ರಾಹಿಂ ಅವರು ಬಹಿರಂಗವಾಗಿ ಹೇಳಿದ್ದರು. ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೇಸ್ ನಾಯಕರು ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಯತ್ನ ಪಟ್ಟರೂ ಸಹ ಪ್ರಯೋಜನವಾಗಿಲ್ಲ.

ಸಿ.ಎಂ. ಇಬ್ರಾಹಿಂ ಬೆಳಗ್ಗೆ 11 ಗಂಟೆಗೆ ಎಂ.ಎಲ್.ಸಿ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದರು. ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ. ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಪಕ್ಷವನ್ನು ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಸಂಬಂಧ ಜೆಡಿಎಸ್ ನಾಯಕರಾದ ಎಚ್ ಡಿ ಕುಮಾರಸ್ವಾಮಿ ದೇವೇಗೌಡರನ್ನು ಸಂಪರ್ಕಿಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನು ಒದಿ : https://cnewstv.in/?p=9209

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*