Cnewstv.in / 31.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಸ್ತೆ ಮಧ್ಯೆ ಸಿಲಿಂಡರಿಗೆ ಹೂವಿನ ಮಾಲಾರ್ಪಣೆ ಮಾಡಿ, ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ.
ಶಿವಮೊಗ್ಗ : ಇಂಧನ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ
ವಿರುದ್ಧವಾಗಿ ಇಂದು ಬೆಳಗ್ಗೆ ಮಹಾವೀರ ಸರ್ಕಲ್ ನಲ್ಲಿ
ಕೋರ್ಟ್ ಸರ್ಕಲ್ ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯ.
ರಸ್ತೆ ಮಧ್ಯೆ ಮಹಾವೀರ ಸರ್ಕಲ್ ನಲ್ಲಿ ಅಡುಗೆ ಅನಿಲದ ಸಿಲಿಂಡರ್ ಇಟ್ಟು ಈ ಸಿಲಿಂಡರಿಗೆ ಹೂವಿನ ಮಾಲಾರ್ಪಣೆ
ಮಾಡಿ ಜಾಗಟೆ ಗಂಟೆಯೂ ಬಾರಿಸುವ ಮೂಲಕವೇ ಪ್ರತಿಭಟನೆಯನ್ನು ಮಾಡಿ ಕಿವುಡುತನವನ್ನು ತೋರಿಸು
ತ್ತಿರುವ ಬಿಜೆಪಿ ಕೇಂದ್ರ ಮತ್ತು ರಾಜ್ಯಸರ್ಕಾರವನ್ನು ಎಚ್ಚರಿಸುವ ಪ್ರಯತ್ನ ಮಾಡಲಾಯಿತು.
ಕೊರೊನಾ ಹೊಡೆತದಿಂದ ಜನಜೀವನ ಚೇತರಿಕೆಯಾಗದೇರುವ ಸಂದರ್ಭದಲ್ಲಿ ಪೆಟ್ರೋಲ್ ಡೀಸೆಲ್ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ದೊಡ್ಡ ಪೆಟ್ಟು ನೀಡಿದೆ ಮತ್ತು ಕೋರೋಣದಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಇಂಧನ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಪರಿಣಾಮವಾಗಿ ದಿನಬಳಕೆ ಪದಾರ್ಥಗಳು ಸೇರಿದಂತೆ ಹಲವಾರು ಉತ್ಪನ್ನಗಳ ದರವು ಹೆಚ್ಚಳಕ್ಕೆ ಕಾರಣವಾಗಿದೆ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೂ ಅಸ್ತಿತ್ವಕ್ಕೆ ಬಂದ ದಿನದಿಂದ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಲೇ ಇದೆ ಅಂತರಾಷ್ಟ್ರೀಯ ಮಾರುಲಿಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದರೂ ಸಹ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆ ಮಾಡುವ ಬದಲು ತನ್ನ ಮನಸ್ಸಿಗೆ ಬಂದಂತೆ ಹೆಚ್ಚಳ ಮಾಡುತ್ತಲೇ ಬಂದಿದೆ ಎಂದರು.
ಜನಸಾಮಾನ್ಯರ ಬದುಕು ಸುಗಮವಾಗಿ ಸಾಗುವಂತೆ
ಕಾಪಾಡಬೇಕಾಗಿದ್ದ ಕೇಂದ್ರದ ಬಿಜೆಪಿ ಸರ್ಕಾರವು ಬೆಲೆಯೇರಿಕೆಯನ್ನು ನಿಯಂತ್ರಿಸಲು ಸಂಪೂರ್ಣವಾಗಿ ವಿಫಲವಾಗಿದೆ. ಆದ್ದರಿಂದ ರಾಷ್ಟ್ರಪತಿಗಳು ಕೂಡಲೇ ಜನವಿರೋಧಿ ಕೇಂದ್ರದ ಬಿಜೆಪಿ ಸರ್ಕಾರವನ್ನು ವಜಾ ಮಾಡಲೇಬೇಕೆಂದು ಆಗ್ರಹಿಸಿದರು.
ಇದನ್ನು ಒದಿ : https://cnewstv.in/?p=9211
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv