Breaking News

ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ 250ರೂ ಹೆಚ್ಚಳ.

Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ 250ರೂ ಹೆಚ್ಚಳ.

ನವದೆಹಲಿ : ವಾಣಿಜ್ಯ ಬಳಕೆಯ LPG ಸಿಲಿಂಡರ್ ದರವನ್ನು ಇಂದಿನಿಂದ 250 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಗಳಲ್ಲಿ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ LPG ಬೆಲೆ ಕೂಡ ಏರಿಕೆಯಾಗಿದೆ.
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಎಲ್ ಪಿ ಜಿ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ಇಂದು ವಾಣಿಜ್ಯ ಬಳಕೆ LPG ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದೆ.

ಗೃಹಬಳಕೆಯ 14.2 Kg ಸಬ್ಸಿಡಿ ರಹಿತ LPG ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಅಡುಗೆ ಅನಿಲದ ದರ ಸಹ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ವಾಣಿಜ್ಯ ಬಳಕೆ LPG ದರ ರಾಷ್ಟ್ರರಾಜಧಾನಿ ದೆಹಲಿ – 2,253 ರೂಪಾಯಿಗಳು, ವಾಣಿಜ್ಯ ನಗರಿ ಮುಂಬೈ – 2,225 ರೂಪಾಯಿಗಳು, ಕಲ್ಕತ್ತಾ – 2,351 ರೂಪಾಯಿಗಳು, ಚೆನ್ನೈ – 2606 ರೂಪಾಯಿ ಅಗಿದೆ.

ಇದನ್ನು ಒದಿ : https://cnewstv.in/?p=9227

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*