Cnewstv.in / 3.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹೊಸ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ.
ಶಿವಮೊಗ್ಗ : ಹೊಸಮನೆ ಬಡಾವಣೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸಮನೆ ರಸ್ತೆಯ ಜಂಬ್ಬಣ್ಣ ರೈಸ್ ಮಿಲ್ ಹತ್ತಿರ ಖಾಲಿ ಜಾಗದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆಯ ಪಿಎಸ್ಐ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಉಮೇಶ್ ನಾಯ್ಕ್, ನಿತಿನ್, ರಾಹಿಲ್ ಖಾನ್, ಶ್ರೇಯಸ್ ನಿತಿನ್ ಎಂದು ಗುರುತಿಸಲಾಗಿದೆ ಆರೋಪಿಗಳಿಂದ 1 ಕೆಜಿ 100 ಗ್ರಾಂ ತೂಕದ ಒಣ ಗಾಂಜಾ ಹಾಗೂ 3,675 ರೂಪಾಯಿ ನಗದು ಹಣ ಹಾಗೂ ಒಂದು ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನು ಒದಿ : https://cnewstv.in/?p=9239
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv