Cnewstv.in / 4.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ನುಗ್ಗಿದ ಕಾಡಾನೆಗಳು..
ಶಿವಮೊಗ್ಗ : ಭದ್ರಾವತಿ ತಾಲೂಕಿನ ಶಂಕರ ಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಕಾಡಾನೆಗಳು ನುಗ್ಗಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಇರುವ ಕುವೆಂಪು ಪ್ರತಿಮೆ, ಸಿಬ್ಬಂದಿಗಳ ಕ್ವಾಟ್ರಸ್ ಹಾಗೂ ಗ್ರಂಥಾಲಯದ ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಂಡಿದೆ. ಕ್ಯಾಂಪಸ್ ತುಂಬಾ ರಾಜಾರೋಷವಾಗಿ ಓಡಾಡುತ್ತಿರುವ ಕಾಡಾನೆಗಳನ್ನು ಕಂಡು ಹೆದರಿದ ವಿವಿ ಸಿಬ್ಬಂದಿಗಳು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.
ಆನೆಗಳನ್ನು ಮರಳಿ ಕಾಡಿಗಟ್ಟಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಪ್ರಯತ್ನ ಪಡುತ್ತಿದ್ದಾರೆ. ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಅನಗತ್ಯವಾಗಿ ಓಡಾಡದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ವಿವಿಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಲ್ಲಿ ಆತಂಕ ಮನೆ ಮಾಡಿದೆ.
ಇದನ್ನು ಒದಿ : https://cnewstv.in/?p=9255
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv