Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ
ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ಅಯೋಜನೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ. ವಿ ಶ್ರೀನಿವಾಸ್ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮದ್ ನಲಪಾಡ್ ರವರ ನಿರ್ದೇಶನದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ದಿನಾಂಕ 9-4-2022 ಶನಿವಾರ ಬೆಳಗ್ಗೆ 11:30 ಕೆ ಬೃಹತ್ ಪ್ರತಿಭಟನೆಯನ್ನು ಹಾಗೂ ನಂತರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದು ಹಾಗೂ 10- 4 – 2022ರ ಭಾನುವಾರ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದ 14 ಬ್ಲಾಕ್ ಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯನ್ನು ಬ್ಲಾಕ್ ಮಟ್ಟದಲ್ಲಿ ನಡೆಸಲಾಗುವುದು.
ಇದನ್ನು ಒದಿ : https://cnewstv.in/?p=9291
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv