Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಗೃಹಸಚಿವ ಅರಗ ಜ್ಞಾನೇಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಯನಗರ ಠಾಣೆಯಲ್ಲಿ ದೂರು ದಾಖಲು.
ಶಿವಮೊಗ್ಗ : ರಾಜ್ಯದ ಗೃಹ ಮಂತ್ರಿಯಾದ ಆರಗ ಜ್ಞಾನೇಂದ್ರ’ರವರು “ಜಾತಿ-ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ತದನಂತರ ನನ್ನ ಹೇಳಿಕೆ ತಪ್ಪಾಗಿದೆ. ನಾನು ತಪ್ಪು ಅರ್ಥೈಸಿಕೊಂಡಿದ್ದೇನೆ ಎಂದು ಸಬೂಬು ಹೇಳುತ್ತಿದ್ದಾರೆ ಜವಾಬ್ದಾರಿಯುತ ಸ್ಥಾನದಲ್ಲಿ ಸಚಿವರಾದ ಅರಗ ಜ್ಞಾನೇಂದ್ರ ಅವರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಬಿಟ್ಟು ಬಿಜೆಪಿಯ ಹೈಕಮಾಂಡ್ ಅನ್ನು ಮೆಚ್ಚಿಸಲು ಈ ರೀತಿಯ ಇಲ್ಲಸಲ್ಲದ ಪೂರಕವಲ್ಲದ ಹೇಳಿಕೆಗಳನ್ನು ನೀಡಿ ತದನಂತರ ತಪ್ಪಾಗಿದೆ ಎಂದು ಹೇಳುತ್ತಿರುವುದು ತೀವ್ರವಾಗಿ ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಜಯನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವರಿಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ದಕ್ಷಿಣ ಬ್ಲಾಕ್ ಎಸ್ ಕುಮರೇಶ್ , ಗ್ರಾಮಾಂತರ ಅಧ್ಯಕ್ಷ ಇ. ಟಿ ನಿತಿನ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ರಾಕೇಶ್ , ಪದಾಧಿಕಾರಿಗಳಾದ ಪವನ್, ದರ್ಶನ್ , ಶ್ರೀನಿವಾಸ್, ಗಜ, ವೆಂಕಟೇಶ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=9298
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv