Breaking News

ರಸ್ತೆ ಮಧ್ಯೆ ಸೌದೆ ಒಲೆ, ಮೋದಿ ಭಾವಚಿತ್ರಕ್ಕೆ ಮಸಿ, ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ ಯುವ ಕಾಂಗ್ರೆಸ್

Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಸ್ತೆ ಮಧ್ಯೆ ಸೌದೆ ಒಲೆ, ಮೋದಿ ಭಾವಚಿತ್ರಕ್ಕೆ ಮಸಿ, ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ ಯುವ ಕಾಂಗ್ರೆಸ್

ಶಿವಮೊಗ್ಗ : ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಎಂಬ ಘೋಷಣೆಯೊಂದಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

 

ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ, ಮಾಡಿ ದೇಶದ ಜನತೆಗೆ ದಿನನಿತ್ಯ ಬರೆ ಹಾಕುತ್ತಿರುವ ಜನವಿರೋಧಿ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ಮಹಾವೀರ ವೃತ್ತ ದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸೌದೆ ಒಲೆ ಹಚ್ಚಿ , ಪ್ರಧಾನಿ ಮೋದಿಯ ,ಅಣಕು ಪ್ರತಿಕೃತಿಗೆ ಮಸಿಬಳಿದು, ಬಿಜೆಪಿ ಶಾಸಕರಿಗೆ ಎಚ್ಚರಿಕೆ ಮುಖಾಂತರ ಪ್ರತಿಭಟಿಸಲಾಯಿತು.

ದೇಶಕ್ಕೆ ಅಚ್ಚೇ ದಿನ್ ತರುತ್ತೇನೆಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಪೆಟ್ರೋಲ್, ಡೀಸೆಲ್ , ರಸಗೊಬ್ಬರ , ಔಷಧಿ ಹಾಗೂ ಕರ್ನಾಟಕದ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್ ದರವನ್ನು ದಿನನಿತ್ಯ ಏರಿಕೆ ಮಾಡುತ್ತಾ ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ಶ್ರೀಸಾಮಾನ್ಯನ ತೆರಿಗೆ ಎಂಬ ಕೂಪದಿಂದ ಕಿತ್ತು ತಿನ್ನುತ್ತಿರುವ ಬಿಜೆಪಿ ಸರ್ಕಾರದ ಜನವಿರೋಧ ನೀತಿಯು ತೀವ್ರ ಖಂಡನೀಯ ಎಂದರು.

ಈಗಾಗಲೇ ಹಲವಾರು ರೈತ-ಕಾರ್ಮಿಕ – ಯುವಕ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಿ ದೇಶದ ಹಲವಾರು ಸರ್ಕಾರಿ ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಈ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ಸಂದೇಶಗಳನ್ನು ನೀಡಿದ್ದು , ಕೂಡಲೇ ರಾಷ್ಟ್ರಪತಿಗಳು ಈ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್. ಪಿ. ಗಿರೀಶ್ ವಹಿಸಿದ್ದರು.‌ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್ ಸುಂದರೇಶ್, ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ,ರಾಜ್ಯ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ , ಶಿವಮೊಗ್ಗ ಜಿಲ್ಲೆಯ ಉಸ್ತುವಾರಿಗಳು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ , ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎಸ್ಪಿ ದಿನೇಶ್, ರವಿಕುಮಾರ್ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಯಮುನ ರಂಗೇಗೌಡ , ಮಹಾನಗರ ಪಾಲಿಕೆ ಸದಸ್ಯರಾದ ಎಚ್ಸಿ ಯೋಗೀಶ್, ಮೇಹಕ್ ಷರೀಫ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅನಿತಾ ಕುಮಾರಿ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಟಿ ನಿತಿನ್ , ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್ , ಎಸ್. ಕುಮರೇಶ್ ಭದ್ರಾವತಿ ಯುವ ಕಾಂಗ್ರೆಸ್ ನಗರಾಧ್ಯಕ್ಷ ವಿನೋದ್ ಕುಮಾರ್, ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನು ಒದಿ : https://cnewstv.in/?p=9319

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*