Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
NSUI ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ.
ಶಿವಮೊಗ್ಗ : ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ.)ನ 51ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ರೋಟರಿ ಬ್ಲಡ್ ಬ್ಯಾಂಕ್‍ನಲ್ಲಿ ರಕ್ತದಾನ ಶಿಬಿರ ಅಯೋಜನೆ ಮಾಡಲಾಗಿತ್ತು.
ಶಿಬಿರವನ್ನುದ್ದೇಶಿಸಿ ಮಾತನಾಡಿದ ಎನ್.ಎಸ್.ಯು.ಐ. ಜಿಲ್ಲಾದ್ಯಕ್ಷ ವಿಜಯ್, ವಿದ್ಯಾರ್ಥಿ ಶಕ್ತಿ ದೇಶದ ದೊಡ್ಡ ಶಕ್ತಿ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿತ್ತು. ಈ ಹಿನ್ನೆಲೆಯಲ್ಲಿ 51 ವರ್ಷಗಳ ಹಿಂದೆ ದೇಶ ಕಂಡ ಧೀಮಂತ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರು ಎನ್.ಎಸ್.ಯು.ಐ. ಅನ್ನು ಸ್ಥಾಪಿಸಿದರು ಎಂದರು.
ಎನ್.ಎಸ್.ಯು.ಐ. ಸ್ಥಾಪನೆಯಾದಾಗಿನಿಂದಲೂ ವಿದ್ಯಾರ್ಥಿಗಳ ಸಮಸ್ಯೆಗಳ ಜೊತೆಗೆ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ನಿರಂತರ ಹೋರಾಟ ಮಾಡುತ್ತಾ ಬಂದಿದೆ. ಹೋರಾಟಗಳಲ್ಲಿ ಯಶಸ್ಸನ್ನೂ ಕಂಡಿದೆ ಎಂದರು.
ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಮೂಡಿಸುವುದರ ಜೊತೆಗೆ ಸೇವಾ ಮನೋಭಾವನೆಯನ್ನು ರೂಢಿಸುವ ಕೆಲಸವನ್ನು ಎನ್.ಎಸ್.ಯು.ಐ. ಮಾಡುತ್ತಾ ಬಂದಿದ್ದು, ನೂರಾರು ನಾಯಕರನ್ನು ದೇಶಕ್ಕೆಮ ಕೊಡುಗೆಯಾಗಿ ನೀಡಿದೆ ಎಂದರು.
ಎನ್.ಎಸ್.ಯು.ಐ. ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಮೂಡಿಸಿ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚಾಗಿ ಎನ್.ಎಸ್.ಯು.ಐ. ಸೇರ್ಪಡೆ ಆಗುವ ಮೂಲಕ ಸದೃಢ ಸಮಾಜ ನಿರ್ಮಾಣದಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಮಧುಸೂದನ್ ಅಲ್ಪಸಂಖ್ಯಾತ ಕಾಂಗ್ರೆಸ್ ನ ನಗರ ಅಧ್ಯಕ್ಷರಾದ ಮಹಮ್ಮದ್ ನಿಹಾಲ್, ಅಕ್ಬರ್
N U S U I ಜಿಲ್ಲಾ ಅಧ್ಯಕ್ಷರಾದ ವಿಜಯ್ ನಗರಾಧ್ಯಕ್ಷ ಚರಣ ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಹಾಗು N S U I ಮುಖಂಡರಾದ ರವಿ ಕಾಟಿಕೆರೆ ಶಿವು ಗಿರೀಶ ರವಿ ಚಂದ್ರೋಜಿ ವಿಕ್ರಮ್ ಕಿರಣ ಇನ್ನು ಹಲವಾರು ಪದಾದಿಕಾರಿಗಳು ಹಾಗು ವಿದ್ಯಾರ್ಥಿಗಳು ಉಪಸ್ತಿತರಿದ್ದರು
ಇದನ್ನು ಒದಿ : https://cnewstv.in/?p=9329
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments