Cnewstv.in / 11.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಇಂದು ಜೊ ಬೈಡನ್ ಹಾಗೂ ನರೇಂದ್ರ ಮೋದಿ ಭೇಟಿ.
ನವದೆಹಲಿ : ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಜೊ ಬೈಡನ್, ವರ್ಚುವಲ್ ಮಾದರಿಯಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆಂದು ಕೇಂದ್ರ ಸರಕಾರ ತಿಳಿಸಿದೆ.
ರಷ್ಯಾದಿಂದ ಕಚ್ಚಾ ತೈಲವನ್ನು ಕೊಳ್ಳಲು ಮುಂದಾಗಿರುವ ಭಾರತದ ಮೇಲೆ ತೈಲವನ್ನು ಕೊಳ್ಳಕೂಡದೆಂದು ಅಮೆರಿಕ, ಪಾಶ್ಚಾತ್ಯ ರಾಷ್ಟ್ರಗಳು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಮಾತುಕತೆ ಭಾರೀ ಮಹತ್ವ ಪಡೆದುಕೊಂಡಿದೆ.
ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುತ್ತಾರೆ ಮತ್ತು ದಕ್ಷಿಣ ಏಷ್ಯಾ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳು ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಇತ್ತೀಚೆಗೆ ಉಂಟಾಗಿರುವ ವಿದ್ಯಮಾನಗಳೂ ಉಭಯ ನಾಯಕರ ನಡುವೆ ಚರ್ಚೆ ಗೊಳಪಡಲಿವೆ’ ಎಂದು ತಿಳಿಸಲಾಗಿದೆ.
ಇದನ್ನು ಒದಿ : https://cnewstv.in/?p=9357
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv