Cnewstv.in / 12.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಂತೋಷ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ತಕ್ಷಣವೇ ಈಶ್ವರಪ್ಪನವರು ರಾಜೀನಾಮೆ ನೀಡಬೇಕು : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್.
ಶಿವಮೊಗ್ಗ : ಸಚಿವ ಕೆ ಎಸ್ ಈಶ್ವರಪ್ಪ ನವರ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಅವರು ಈಶ್ವರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಪ್ರಭಾವಿ ಹಾಗೂ ಹಿರಿಯ ನಾಯಕ ಕೆಎಸ್ ಈಶ್ವರಪ್ಪನವರು ಅದೇ ಸರಿಸಮಾನವಾಗಿ ಕುಖ್ಯಾತಿಯನ್ನು ಕೂಡ ಪಡೆದಿದ್ದಾರೆ. ಇವರ ವಿರುದ್ದ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಆರೋಪ ಮಾಡಿದಾಗ ಸರ್ಕಾರ ಅದರ ಬಗ್ಗೆ ಗಮನ ಹರಿಸ ಬೇಕಿತ್ತು ಆದರೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಇದರ ಪರಿಣಾಮವಾಗಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂತ್ರಿಗಳ ವಿರುದ್ಧ ಕಂಪ್ಲೇಂಟ್ ಮಾಡಿದವರಿಗೆ ರಕ್ಷಣೆಯನ್ನು ಕೊಡಬೇಕಾಗಿರುವ ಸರ್ಕಾರದ ಜವಾಬ್ದಾರಿ. ಈಗ ಆ ವ್ಯಕ್ತಿಯ ಜೀವ ಹೋಗಿದೆ. ತಕ್ಷಣವೇ ಸಂತೋಷ ಸಾವಿನ ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸಬೇಕು ಹಾಗೂ ಮುಖ್ಯಮಂತ್ರಿಗಳು ಸಚಿವ ಕೆ.ಎಸ್. ಈಶ್ವರಪ್ಪನವರು ರಾಜೀನಾಮೆ ಪಡೆಯಬೇಕು ಎಂದರು.
ಇದನ್ನು ಒದಿ : https://cnewstv.in/?p=9374
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv