Cnewstv.in / 12.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಗುತ್ತಿಗೆದಾರ ಸಂತೋಷ ಅತ್ಮಹತ್ಯೆ ಪ್ರಕರಣ : ಯುವ ಕಾಂಗ್ರೆಸ್ ನಿಂದ ಕೆ.ಎಸ್ ಈಶ್ವರಪ್ಪ ಮನೆ ಮುತ್ತಿಗೆ ಯತ್ನ.
ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸಚಿವ ಕೆ ಎಸ್ ಈಶ್ವರಪ್ಪ ನವರ ಮನೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.
ಸಚಿವ ಕೆಎಸ್ ಈಶ್ವರಪ್ಪನವರ ವಿರುದ್ಧ 40 % ಲಂಚ ಪಡೆದ ಆರೋಪ ಮಾಡಿದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಈಶ್ವರಪ್ಪನವರೇ ಕಾರಣ ಎಂದು ಡೆತ್ ನೋಟ್ ಬರೆದಿಡಲಾಗಿದೆ ಎನ್ನಲಾಗುತ್ತಿದೆ.
ಸಚಿವ ಕೆ ಎಸ್ ಈಶ್ವರಪ್ಪ ನವರು ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳಲು ಈಶ್ವರಪ್ಪನವರೇ ನೇರ ಕಾರಣ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಈಶ್ವರಪ್ಪನವರ ಮನೆ ಮುತ್ತಿಗೆ ಹಾಕಲು ಯತ್ನಿಸಿದರು.
ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸಚಿವ ಕೆ.ಎಸ್.ಈಶ್ವರಪ್ಪರವರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಹಾಕಲು ಮುಂದಾಗುತ್ತಿದ್ದಂತೆ ಪೊಲೀಸರು ರೈಲ್ವೆ ಕ್ರಾಸಿಂಗ್ ಬಳಿನೇ ತಡೆದು ಬಂಧಿಸಿದರು.
ಇದನ್ನು ಒದಿ : https://cnewstv.in/?p=9377





ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv