Breaking News

ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಹಂಚಿಕೆ.

Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಹಂಚಿಕೆ.

ಶಿವಮೊಗ್ಗ : ನಗರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್-2022ರ ಮಾಹೆಗೆ ಬಿಡುಗಡೆಯಾದ ಪಡಿತರಧಾನ್ಯವನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಿ ಬಿಡುಗಡೆ ಮಾಡಿದೆ.

ಅಂತ್ಯೋದಯ ಪಡಿತರ ಚೀಟಿದಾರರ ಕುಟುಂಬಕ್ಕೆ ಎನ್‍ಎಫ್‍ಎಸ್‍ಎ ಯೋಜನೆಯಡಿ ಪ್ರತಿ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ಹಾಗೂ ಕುಟುಂಬದ ಪ್ರತಿ ಸದಸ್ಯರಿಗೆ ಪಿಎಂಜಿಕೆಎವೈ ಯೋಜನೆಯಡಿ 5 ಕೆ.ಜಿ. ಅಕ್ಕಿ ಹಂಚಿಕೆ ನೀಡಲಾಗಿದೆ. ಆದ್ಯತಾ ಕುಟುಂಬ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ಎನ್‍ಎಫ್‍ಎಸ್‍ಎ ಹಂಚಿಕೆ 5 ಕೆ.ಜಿ.ಅಕ್ಕಿ ಮತ್ತು ಪಿಎಂಜಿಕೆಎವೈ ಯೋಜನೆಯಡಿ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆ.ಜಿ.ಅಕ್ಕಿ ಹಾಗೂ ಓಎಂಎಸ್‍ಎಸ್ ಯೋಜನೆಯಡಿ ಪ್ರತಿ ಸದಸ್ಯರಿಗೆ 1 ಕೆ.ಜಿ. ಅಕ್ಕಿಯನ್ನು ಒಟ್ಟು 11 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಆದ್ಯತೇತರ (ಎಪಿಎಲ್) ಪಡಿತರ ಚೀಟಿದಾರರಿಗೆ ಏಕ ಸದಸ್ಯರಿಗೆ ರೂ. 15/- ದರದಲ್ಲಿ 5 ಕೆ.ಜಿ., 2 ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುವುದು.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ಮಾಹೆಯ 1ನೇ ತಾರೀಖಿನಿಂದ ಬೆಳಗ್ಗೆ 7.00 ರಿಂದ ರಾತ್ರಿ 9.00 ರವರೆಗೆ ಊಟದ ಸಮಯ ಹೊರತುಪಡಿಸಿ ತಿಂಗಳ ಅಂತ್ಯದವರೆಗೆ ಪಡಿತರ ವಿತರಿಸಲಾಗುವುದು. ಪಡಿತರ ಚೀಟಿದಾರರು ಆಧಾರ್ ಆಧಾರಿತ ಬಯೋ ಮೆಟ್ರಿಕ್ ಅಥವಾ ಓಟಿಪಿ ನೀಡಿ ಪಡಿತರ ಪಡೆಯುವುದು. ಅಂತ್ಯೋದಯ/ಬಿಪಿಎಲ್ ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಸಂಪೂರ್ಣ ಉಚಿತವಾಗಿದ್ದು, ಬಯೋ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಒದಿ : https://cnewstv.in/?p=9400

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*