Breaking News

ಸಚಿವ ಕೆ.ಎಸ್.ಈಶ್ವರಪ್ಪನವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು.‌ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ..

Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಚಿವ ಕೆ.ಎಸ್.ಈಶ್ವರಪ್ಪನವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು.‌ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ..

ಶಿವಮೊಗ್ಗ : ಸಚಿವ ಕೆ ಎಸ್ ಈಶ್ವರಪ್ಪ ನವರು ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಮುಗಿಸಿ ವಾಪಸ್ ಹೋಗುವಾಗ, ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ಕಾರಿಗೆ ಕಪ್ಪು ಬಾವುಟ ತೋರಿಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.‌ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಕರೆದೊಯ್ಯುವಾಗ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಾಹನವನ್ನು ಅಡ್ಡಗಟ್ಟಿ ಈಶ್ವರಪ್ಪನವರ ಪರವಾಗಿ ಘೋಷಣೆಗಳನ್ನು ಕೂಗಿದರು.

ಈ ಘಟನೆಯಿಂದಾಗಿ ಕೆಲಕಾಲ ಬಿಜೆಪಿ ಕಚೇರಿಯ ಮುಂಭಾಗ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸುವಂತಾಯಿತು.

ಇದನ್ನು ಒದಿ : https://cnewstv.in/?p=9406

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*