Breaking News

ಕೆ.ಎಸ್. ಈಶ್ವರಪ್ಪನವರ ಮನೆಗೆ ವಿವಿಧ ಮಠಾಧೀಶರ ಭೇಟಿ. ‌

Cnewstv.in / 16.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೆ.ಎಸ್. ಈಶ್ವರಪ್ಪನವರ ಮನೆಗೆ ವಿವಿಧ ಮಠಾಧೀಶರ ಭೇಟಿ. ‌

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆಎಸ್ ಈಶ್ವರಪ್ಪನವರ ಮನೆಗೆ ಇಂದು ವಿವಿಧ ಮಠಾಧೀಶರು ಭೇಟಿ ನೀಡಿ ಧೈರ್ಯ ತುಂಬಿದರು.

ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ಚಿತ್ರದುರ್ಗದ, ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿ ಕನಕಗುರುಪೀಠ, ಜಗದ್ಗುರು ಡಾ.ಶ್ರೀ ಶಾಂತವೀರ ಮಹಾಸ್ವಾಮಿಜಿ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗ, ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಜಿ ಭೋವಿಗುರುಪೀಠ ಚಿತ್ರದುರ್ಗ, ಜಗದ್ಗುರು ಶ್ರೀ ಮಾದರಚನ್ನಯ್ಯ ಮಹಾಸ್ವಾಮಿಜಿ ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗ, ಜಗದ್ಗುರು ಶ್ರೀ ಪುರುಷೋತ್ತಮನಾಂದಪುರಿ ಮಹಾಸ್ವಾಮಿಜಿ ಭಗೀರಥ ಪೀಠ, ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಜಿ ಕನಕಗುರುಪೀಠ ಹೊಸದುರ್ಗ, ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮಿಜಿ ನಾರಾಯಣ ಗುರುಪೀಠ ಶಿವಮೊಗ್ಗ ಮತ್ತು ಜಗದ್ಗುರು ಶ್ರೀ ಬಸವಮಾಚಿದೇವ ಮಹಾಸ್ವಾಮಿಜಿ ಮಡಿವಾಳ ಗುರುಪೀಠದ ಸ್ವಾಮೀಜಿಗಳು ಭಾಗವಹಿಸಿದ್ದರು.

ಇದನ್ನು ಒದಿ : https://cnewstv.in/?p=9425

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*