Breaking News

ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ – ಐವರ ಸಾವು, ಹಲವು ಮಂದಿ ಅಸ್ವಸ್ಥ.

Cnewstv.in / 18.4.2022 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಐವರು ಸಾವು.

ಮಂಗಳೂರು : ವಿಶೇಷ ಆರ್ಥಿಕ ವಲಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕಾರ್ಖಾನೆಗೆ ವಿವಿಧೆಡೆಯಿಂದ ಬರುವ ಮೀನಿನ ತ್ಯಾಜ್ಯವನ್ನು ಶುದ್ಧೀಕರಿಸುವ ಟ್ಯಾಂಕ್ ನನ್ನು ಕಾರ್ಮಿಕನೊಬ್ಬ ಶುಚಿಗೊಳಿಸಲು ಕೆಳಗಿಳಿದಿದ್ದು, ಅದು ಸುಮಾರು 20 ಅಡಿ ಆಳವಾಗಿದೆ. ಅ ಸಮಯದಲ್ಲಿ ಕಾರ್ಮಿಕನನ್ನು ರಕ್ಷಣೆ ಮಾಡಲೆಂದು ಹೋದ 8 ಮಂದಿಯ ಉಸಿರಾಟ ತೊಂದರೆಯಾಗಿದೆ ಎನ್ನಲಾಗಿದೆ.

ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಎಂದು‌ ಗುರುತಿಸಲಾಗಿದೆ. ಮಿರಾಜುಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬ್ಉಲ್ಲಾ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥ ಕಾರ್ಮಿಕರಿಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸದ್ಯ‌ ಕಾರ್ಖಾನೆಯ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನು ಒದಿ : https://cnewstv.in/?p=9451

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*