ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ.
Cnewstv.in / 19.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ.
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,247 ಪ್ರಕರಣಗಳು ವರದಿಯಾಗಿದೆ.
ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 11,860. ಹಾಗೂ ಕಳೆದ 24 ಗಂಟೆಯಲ್ಲಿ 318 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.
ಕಳೆದ 24 ಗಂಟೆಯಲ್ಲಿ 928 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 4,25,11,701 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೋವಿಡ್ ಚೇತರಿಕಾ ಪ್ರಮಾಣ 98.76 ರಷ್ಟಿದೆ.
ದೇಶದಲ್ಲಿ ಇದುವರೆಗೂ ಕೋವಿಡ್ 19 ಲಸಿಕಾ ಅಭಿಯಾನದ ಅಡಿಯಲ್ಲಿ ಒಟ್ಟು 186.72 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಇದನ್ನು ಒದಿ : https://cnewstv.in/?p=9475
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. 2022-04-19
imunify-bot-check