ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ.
Cnewstv.in / 19.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ.
ಶಿವಮೊಗ್ಗ :ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಂಸ್ಥೆಯು 2022-23 ನೇ ಸಾಲಿನ ಉದ್ಯೋಗಾಧಾರಿತ ಮತ್ತು ಶೇ.100 ಉದ್ಯೋಗ ಖಚಿತ ಡಿಪ್ಲೊಮಾ, ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು ದೇಶದ ಪಾಲಿಮರ್/ಪೆಟ್ರೊಕೆಮಿಕಲ್ಸ್/ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ.
ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ(ಡಿಪಿಟಿ), ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ(ಡಿಪಿಎಚಿಟಿ)-3 ವರ್ಷಗಳು ಮತ್ತು ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಪ್ರೊಸೆಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-ಪಿಪಿಟಿ)-2 ವರ್ಷಗಳ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು.
ಎಸ್‍ಎಸ್‍ಎಲ್‍ಸಿ, ಪಿಯುಸಿ(ವಿಜ್ಞಾನ) ಮತ್ತು ಬಿ.ಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು/ಹಾಜರಾದವರು ಅರ್ಜಿ ಸಲ್ಲಿಸಬಹುದಾಗಿದ್ದು ಜೂನ್ 05 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ https://cipet2022.onlineregistrationform.org/CIPET ಅಥವಾ ವೆಬ್‍ಸೈಟ್ www.cipet.gov.in ವೀಕ್ಷಿಸಬಹುದು ಹಾಗೂ ದೂ.ಸಂ 0821-2510618/9791431827/9466585669/9480253024 ಸಂಪರ್ಕಿಸಬಹುದೆಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಹಾಗೂ ಮುಖ್ಯಸ್ಥರಾದ ಆರ್.ಟಿ.ನಾಗರಳ್ಳಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=9490
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಜಿಟಿಟಿಸಿ : ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ. 2022-04-19
Recent Comments