Breaking News

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ, ದಂಡವಿಧಿಸಿದ ನ್ಯಾಯಾಲಯ.

Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ, ದಂಡವಿಧಿಸಿದ ನ್ಯಾಯಾಲಯ.

ಶಿವಮೊಗ್ಗ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಮಂಜಪ್ಪ (49) ಎಂಬುವವರಿಗೆ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ.

9 ವರ್ಷದ ಬಾಲಕಿಯೊಬ್ಬಳು ಬೆಂಕಿಪಟ್ಟಣ ಕೇಳಿಕೊಂಡು ತನ್ನ ಪಕ್ಕದ ಮನೆಯ ಮಂಜಪ್ಪ ರವರ ಮನೆಗೆ ಹೋದಾಗ ಆರೋಪಿ ಮಂಜಪ್ಪನು ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ನೊಂದ ಬಾಲಕಿ ನೀಡಿದ ಹೇಳಿಕೆ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0115/2020 ಕಲಂ 8 ಪೋಕ್ಸೋ ಕಾಯ್ದೆ ಮತ್ತು ಕಲಂ 354 (A) ಐಪಿಸಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-1 ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಧೀಶರಾದ ಶ್ರೀ ದಯಾನಂದ್ ವಿ ಹೆಚ್ ಆರೋಪಿತನಾದ ಮಂಜಪ್ಪನ ವಿರುದ್ಧ ಕಲಂ 10 ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ 05 ವರ್ಷಗಳ ಕಾಲ ಕಠಿಣ ಕಾರಾವಾಸ ಶಿಕ್ಷೆ ಮತ್ತು 30,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿದ್ದಾರೆ.

ಇದನ್ನು ಒದಿ‌ : https://cnewstv.in/?p=9494

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*