Breaking News

ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ : ಬಸವರಾಜ ಬೊಮ್ಮಾಯಿ

Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ : ಬಸವರಾಜ ಬೊಮ್ಮಾಯಿ.

ಶಿವಮೊಗ್ಗ : ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲೇ ನಮ್ಮ ರಾಜ್ಯ ಸರ್ಕಾರಿ ನೌಕರರು ದಕ್ಷ ಅಧಿಕಾರಿಗಳೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು ಇದಕ್ಕೆ ಹಲವಾರು ದಶಕಗಳಿಂದ ಸೇವೆ ಸಲ್ಲಿಸಿದ ಹಿರಿಯ ಸರ್ಕಾರಿ ಅಧಿಕಾರಿ/ನೌಕರರ ಶ್ರಮವೂ ಕಾರಣವಾಗಿದೆ. ಅವರನ್ನು ಈ ಸಮಯದಲ್ಲಿ ಸ್ಮರಿಸುತ್ತಾ ಅಭಿನಂದಿಸುತ್ತೇನೆ. ಈ ಪರಂಪರೆ ಹೀಗೇ ಮುಂದುವರೆಸುವ ಕರ್ತವ್ಯ ಮತ್ತು ನೈತಿಕ ಜವಾಬ್ದಾರಿ ನಿಮ್ಮ ಮೇಲಿದೆ. ನಮ್ಮ ಜವಾಬ್ದಾರಿಯನ್ನು ಸ್ಪಷ್ಟವಾಗಿ ತಿಳಿದುಕೊಂಡಲ್ಲಿ ನಮ್ಮ ಕರ್ತವ್ಯಕ್ಕೆ ನ್ಯಾಯ ಒದಗಿಸಬಹುದಾದ್ದರಿಂದ ಆಡಳಿತ ಯಂತ್ರದ ಬಗ್ಗೆ ಸ್ಪಷ್ಟತೆ ಇರಬೇಕು.

ಆಳುವುದೇ ಬೇರೆ ಮತ್ತು ಆಡಳಿತ ಮಾಡುವುದೇ ಬೇರೆ. ಆದ್ದರಿಂದ ನಾವು ಈ ಎರಡರ ನಡುವಿನ ವ್ಯತ್ಯಾಸ ಸ್ಪಷ್ಟಪಡಿಸಿಕೊಳ್ಳಬೇಕು. ನಮ್ಮ ಪಾತ್ರವನ್ನು ನಿಷ್ಟೆಯಿಂದ ನಿರ್ವಹಿಸಿದಲ್ಲಿ ನಾವು ಇಡೀ ರಾಜ್ಯದ ಜನತೆಗೆ ಅಭಿವೃದ್ದಿಯ ಫಲ ನೀಡಲು ಸಾಧ್ಯ.

ಪ್ಯೂನ್‍ನಿಂದ ಹಿಡಿದು ಅಧಿಕಾರಿವರೆಗೆ ತಮ್ಮ ಅಧಿಕಾರವನ್ನು ಜನಪರವಾಗಿ ಬಳಸಬೇಕು. ಕಾನೂನು ಬದ್ದವಾಗಿ ಕೆಲಸ ಮಾಡಬೇಕು. ವಿವೇಚನೆ ಬಳಸುವ ಸಂದರ್ಭದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿ ಪರವಾಗಿ ಚಿಂತಿಸಿ ನಿರ್ಣಯ ಕೈಗೊಳ್ಳಬೇಕು. ಶ್ರೀಮಂತನ ಪರವಾಗಿ ಅಲ್ಲ. ಬಡವರು, ಜನ ಸಾಮಾನ್ಯರ ಪರವಾದ ನಿರ್ಣಯ ಕೈಗೊಳ್ಳಬೇಕು ಎಂದರು.

ಆಡಳಿತ ಸುಧಾರಣೆ 2ನೇ ಆಯೋಗದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತೆಗುಕೊಂಡಿದ್ದೇವೆ. ಬದಲಾಗುತ್ತಿರುವ ಜಾಗತಿಕ ವಿದ್ಯಮಾನಗಳು ಸರ್ಕಾರದ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವು ಸರ್ಕಾರಿ, ಖಾಸಗಿ ಎಲ್ಲರ ಸಹಭಾಗಿತ್ವದಲ್ಲಿ ಕೆಲಸ ಮಾಡಬೇಕಿದೆ. ಈಗ ನಮ್ಮ ಚಿಂತನೆ, ಕಾರ್ಯವೈಖರಿಗಳು ಬದಲಾಗಬೇಕು.

ಗ್ರಾ.ಪಂ ಯಿಂದ ಹಿಡಿದು ವಿಧಾನಸೌಧದ ವರೆಗೆ ಈ ತಂತ್ರಜ್ಞಾನ ಬಳಕೆಯ ವ್ಯವಸ್ಥೆ ಬಂದಿದೆ. ನೀವು ನಿಗದಿತ ಅವಧಿಯಲ್ಲಿ ಕೈಗೊಳ್ಳುವ ನಿರ್ಧಾರ ನಿಮ್ಮ ಜನಪರ ಕಳಕಳಿಯನ್ನು ತೋರುತ್ತದೆ. ಜನರ ಓಡಾಟ ತಪ್ಪಿಸುತ್ತದೆ, ಭ್ರಷ್ಟರನ್ನಾಗುವುದನ್ನು ತಪ್ಪಿಸುತ್ತದೆ, ಆರೋಪವನ್ನು ತಪ್ಪಿಸುತ್ತದೆ.

ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುತ್ತವೆ. ಅದಕ್ಕೆ ನಾವು ನಮ್ಮ ಸಾಮಾಜಿಕ, ಜನಪರ ಕೆಲಸ, ಕಾರ್ಯಕ್ಷಮತೆಯ ಮೂಲಕ ಉತ್ತರ ನೀಡಬೇಕು. ಅದನ್ನು ನಾನು ನಿಮ್ಮಿಂದ ಬಯಸುತ್ತಿದ್ದೇನೆ. ಬನ್ನಿ ಬದಲಾವಣೆ ಮಾಡೋಣ. ಆಡಳಿತ ಯಂತ್ರದಲ್ಲಿ ಬದಲಾವಣೆ ಮಾಡೋಣ, ಆಳುವ ರೀತಿಯನ್ನು ಬದಲಾಯಿಸೋಣ, ಜನಸಾಮಾನ್ಯರ ಬಳಿಗೆ ವ್ಯವಸ್ಥೆಯನ್ನು ಕೊಂಡೊಯ್ಯೋಣ. ಬಡವರು, ರೈತರು, ದೀನ ದಲಿತರು ಸೇರಿದಂತೆ ಎಲ್ಲರ ಅಭಿವೃದ್ದಿಗಾಗಿ ಸ್ಥಿತಪ್ರಜ್ಞ ಮತ್ತು ಸಮಯಪ್ರಜ್ಞೆಯಿಂದ ಕೆಲಸ ಮಾಡೋಣವೆಂದು ಕರೆ ನೀಡಿದರು.

ಇದನ್ನು ಒದಿ‌ : https://cnewstv.in/?p=9508

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments