ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
Cnewstv.in / 22.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದೆ.
ಇಂದಿನಿಂದ ಮೆ 18 ರವರೆಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ರಾಜ್ಯದ 5,241 ಕಾಲೇಜುಗಳಿಂದ 6,84,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಅಕ್ರಮಗಳ ಮೇಲೆ ನಿಗಾವರಿಸುವುದಕ್ಕಾಗಿ 2,900 ಕ್ಕೂ ಹೆಚ್ಚು ಜಿಲ್ಲಾ ತಾಲ್ಲೂಕು ಹಾಗೂ ವಿಶೇಷ ಜಾಗೃತದಳ ರಚಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕ್ರಮವನ್ನು ವಹಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
SSLC ಪರೀಕ್ಷಾ ನಿಯಮದಂತೆ ಪಿಯುಸಿ ಪರೀಕ್ಷೆಯಲ್ಲಿ ಸಹ ಕಾಲೇಜಿನ ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದ ಬೇಕಿದೆ. ಧರ್ಮವನ್ನ ಬಿಂಬಿಸುವಂತಹ ಯಾವುದೇ ವಸ್ತ್ರವನ್ನು ಧರಿಸುವಂತಿಲ್ಲ.
ಇದನ್ನು ಒದಿ : https://cnewstv.in/?p=9510
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ 2022-04-22
Recent Comments