Breaking News

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ..

Cnewstv.in / 22.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ..

ನವದೆಹಲಿ : ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,451 ಏರಿಕೆಯಾಗಿದೆ.

ಕಳೆದ ಮೂರು ದಿನಗಳಿಂದ ದೇಶದಲ್ಲಿ 2 ಸಾವಿರಕ್ಕಿಂತ ಅಧಿಕ ಕೊರೊನಾ ಪ್ರಕರಣಗಳು ಪ್ರತಿದಿನ ವರದಿಯಾಗುತ್ತಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 14,241 ಕ್ಕೆ ಏರಿಕೆಯಾಗಿದೆ.‌

ಕಳೆದ 24 ಗಂಟೆಗಳಲ್ಲಿ ಕೊರೊನಾದಿಂದ 1,589 ಮಂದಿ ಗುಣಮುಖರಾಗಿದ್ದು, ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 4,25,16,068 ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 54 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಈವರೆಗೆ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 5,22,116 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ ಈವರೆಗೆ 4,30,52,425 ಕ್ಕೆ‌ ಏರಿಕೆಯಾಗಿದೆ.

ಇದನ್ನು ಒದಿ‌ : https://cnewstv.in/?p=9510

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*