ಸಾಂದರ್ಭಿಕ ಚಿತ್ರ
ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು.
Cnewstv.in / 22.04.2022 / ಉಡುಪಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು.
ಉಡುಪಿ : ಹಿಜಾಬ್ ಇಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲ್ಲ ಎಂದು ಇಬ್ಬರು ವಿದ್ಯಾರ್ಥಿನಿಯರು ವಾಪಾಸಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ ಪರೀಕ್ಷಾ ಕೇಂದ್ರದಲ್ಲಿ ಧರ್ಮವನ್ನ ಪ್ರತಿಬಿಂಬಿಸುವಂತಹ ಯಾವುದೇ ವಸ್ತ್ರವನ್ನು ಧರಿಸುವಂತಿಲ್ಲ. ಆದರೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಆಗಮಿಸಿದ್ದರು. ಆದರೆ ಪ್ರಾಂಶುಪಾಲರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದರು.
ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದ 6 ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರಿಗೆ ಇಂದು ಪರೀಕ್ಷೆ ಎದುರಿಸಬೇಕಾಗಿತ್ತು. ಆದರೆ ಇಂದು ಕೂಡ ಅವರು ಹಿಜಾಬ್ ಧರಿಸದೆ ಪರೀಕ್ಷೆ ಬರೆಯುವುದಿಲ್ಲ ಎಂದು ವಾಪಸಾಗಿದ್ದಾರೆ.
ಕಾಲೇಜಿನವರು ವಿದ್ಯಾರ್ಥಿಗಳ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರೂ ಸಹ ಪ್ರಯೋಜನವಾಗಿಲ್ಲ. ಪರೀಕ್ಷೆಗೆ ಹಾಜರಾಗುವ ಸಮಯ ಮುಕ್ತಾಯವಾದ ಕೂಡಲೇ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ವಿದ್ಯಾರ್ಥಿನಿಯರನ್ನು ಹೊರಗೆ ಕಳುಹಿಸಿದರು.
ಇದನ್ನು ಒದಿ : https://cnewstv.in/?p=9517
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು. 2022-04-22
Recent Comments