ಕಂಟ್ರಿ ಕ್ಲಬ್ ನಲ್ಲಿ ಆರಂಭವಾಗುತ್ತಿದೆ ನೂತನ ಹೈಟೆಕ್ ಕ್ರೀಡಾ ಸಂಕೀರ್ಣ.
Cnewstv.in / 23.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕಂಟ್ರಿ ಕ್ಲಬ್ ನಲ್ಲಿ ಆರಂಭವಾಗುತ್ತಿದೆ ನೂತನ ಹೈಟೆಕ್ ಕ್ರೀಡಾ ಸಂಕೀರ್ಣ.
ಶಿವಮೊಗ್ಗ: ಪ್ರತಿಷ್ಠಿತ ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ಮೇ 1ರಂದು ನೂತನ ಕ್ರೀಡಾ ಸಂಕೀರ್ಣದ
ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಕಂಟ್ರಿ ಕ್ಲಬ್ ಅಧ್ಯಕ್ಷ, ವಿಧಾನ
ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಅತ್ಯಾಧುನಿಕ ವ್ಯವಸ್ಥೆಯೊಂದಿಗೆ ಐದು ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ದೊಡ್ಡ ಕ್ರೀಡಾ ಸಂಕೀರ್ಣ ನಿರ್ಮಾಣ ಪೂರ್ಣಗೊಂಡಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕ್ರೀಡಾ ಸಂಕೀರ್ಣ ಉದ್ಘಾಟಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
1991ರಲ್ಲಿ ಸಮಾನ ಮನಸ್ಕರು ಸೇರಿ ತುಂಗಾ ನದಿ ತೀರದಲ್ಲಿ ಮೂರುವರೆ ಎಕರೆ ಪ್ರದೇಶದಲ್ಲಿ ಆರಂಭವಾದ ಶಿವಮೊಗ್ಗ ಕಂಟ್ರಿ ಕ್ಲಬ್ ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕ್ಲಬ್ ಆಗಿ
ರೂಪುಗೊಂಡಿದೆ. ಪ್ರಭಾವಿ ಸಂಸ್ಥೆಯಾಗಿ ಸದೃಢವಾಗಿ ರೂಪುಗೊಳ್ಳುತ್ತ ಸಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಶಿವಮೊಗ್ಗ ಕಂಟ್ರಿ ಕ್ಲಬ್‌ನಲ್ಲಿ 1200 ಸದಸ್ಯರು ಇದ್ದು, ಎಲ್ಲ ಸದಸ್ಯರ ಸಹಕಾರದಿಂದ ಸಕಲ ರೀತಿಯಲ್ಲಿ ಅನುಕೂಲ ಹಾಗೂ ಸೌಲಭ್ಯ ಒದಗಿಸಲಾಗುತ್ತಿದೆ. 1200 ಸಕ್ರಿಯ ಸದಸ್ಯರಿಗೆ ಕ್ರೀಡಾ ಚಟುವಟಿಕೆಗೆ ಪೂರಕವಾಗಿ ಅನುಕೂಲವಾಗುವಂತೆ ಕ್ರೀಡಾ ಸಂಕೀರ್ಣ ರೂಪಿಸಲಾಗಿದೆ. ರೆಸ್ಟೋರೆಂಟ್ ವ್ಯವಸ್ಥೆ ಇದೆ.
ಎಲ್ಲ ಸದಸ್ಯರ ಕನಸು ಹಾಗೂ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲು ಶಿವಮೊಗ್ಗ ಕಂಟ್ರಿ ಕ್ಲಬ್
ವೇದಿಕೆಯಾಗಿ ಕೆಲಸ ಮಾಡಿದೆ ಎಂದು ಹೇಳಿದರು.
ಶಿವಮೊಗ್ಗ ಕಂಟ್ರಿ ಕ್ಲಬ್‌ನಲ್ಲಿ ಎಲ್ಲ ಸೌಲಭ್ಯ ಒಳಗೊಂಡಿರುವ ನೂತನ ಕ್ರೀಡಾ ಸಂಕೀರ್ಣದಲ್ಲಿ ಒಳಾಂಗಣ
ಸೆಟಲ್ ಕೋರ್ಟ್, ಸ್ಮಾರ್ಷ್, ಬಿಲ್ಲಿಯರ್ಡ್, ಬೌಲಿಂಗ್ ಗ್ಯಾಲನ್, ಕೇರಂ, ಚೇಸ್, ಅಧ್ಯಯನ ಕೊಠಡಿ
ಸೇರಿದಂತೆ ಉತ್ತಮ ಹಾಗೂ ಆತ್ಯಾಧುನಿಕ ಸೌಕರ್ಯದ ವ್ಯವಸ್ಥೆ ರೂಪಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ಜೆ.ರಘುರಾಮ್,
ಸೂಡಾ ಅಧ್ಯಕ್ಷ ನಾಗರಾಜ್, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಪಾಲ್ಗೊಳ್ಳುವರು. ಶಿವಮೊಗ್ಗ ಹಾಗೂ ರಾಜ್ಯದ ಪ್ರಮುಖ ಜನಪ್ರತಿನಿಧಿಗಳು ಭಾಗವಹಿಸುವರು ಎಂದರು. ಎಲ್ಲ ಸದಸ್ಯರ ಸಹಕಾರ, ಮಾರ್ಗದರ್ಶನ, ಪ್ರೋತ್ಸಾಹದಿಂದ ಕ್ರೀಡಾ ಸಂಕೀರ್ಣದ ನಿರ್ಮಾಣ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸುವ ಆಶಯವಿದೆ ಎಂದು ತಿಳಿಸಿದರು. ಶಿವಮೊಗ್ಗ ಕಂಟ್ರಿ ಕ್ಲಬ್ ನೂತನ ಕ್ರೀಡಾ ಸಂಕೀರ್ಣದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಭೂಪಾಳಂ ಶಶಿಧರ್, ಶಿವಮೊಗ್ಗ ಕಂಟ್ರಿ ಕ್ಲಬ್ ಕಾರ್ಯದರ್ಶಿ ಜಿ.ಎನ್.ಮೋಹನ್ ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=9537
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಕಂಟ್ರಿ ಕ್ಲಬ್ ನಲ್ಲಿ ಆರಂಭವಾಗುತ್ತಿದೆ ನೂತನ ಹೈಟೆಕ್ ಕ್ರೀಡಾ ಸಂಕೀರ್ಣ. 2022-04-23