Breaking News

ಕೊರೊನಾ 4 ನೇ ಅಲೆ : ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ..

Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೊರೊನಾ 4 ನೇ ಅಲೆ : ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ..

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. 4ನೇ ಅಲೆ ಆರಂಭವಾಗಬಹುದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯ ನಂತರ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಕೊರೊನಾ 4 ನೇ ಅಲೆಯನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಪಾಡಿಕೊಳ್ಳಬೇಕು ಎಂದರು. ‌

ಈಗಾಗಲೇ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶೇಕಡ 1.9ರಷ್ಟು ಪ್ರಕರಣಗಳು ದಾಖಲಾಗಿದೆ. ಹೊಸ ಮಾರ್ಗಸೂಚಿಯಂತೆ ಜನರು ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸದಿದ್ದರೆ ದಂಡ ಹಾಕುವುದಿಲ್ಲ ಆದರೆ ಜನರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಇದನ್ನು ಒದಿ‌ : https://cnewstv.in/?p=9561

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*