Breaking News

ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್, ಐಪಿಎಲ್ ನಲ್ಲಿ ನಾಲ್ಕನೇ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್..

Cnewstv.in / 26.04.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್, ಐಪಿಎಲ್ ನಲ್ಲಿ ನಾಲ್ಕನೇ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್..

ಮುಂಬೈ : ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಭರ್ಜರಿ ಗೆಲವು ಪಡೆಯುವುದರ ಮೂಲಕ ಐಪಿಎಲ್ ನಾಲ್ಕನೇ ಗೆಲುವು ದಾಖಲಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ 11 ರನ್‌ಗಳಿಂದ ಪಂಜಾಬ್ ಕಿಂಗ್ಸ್ ಗೆಲವು ಸಾಧಿಸಿದೆ. ಪಂಜಾಬ್ ಕಿಂಗ್ಸ್‌ ಪಾಯಿಂಟ್ಸ್ ಟೇಬಲ್‌ನಲ್ಲಿ 8 ನೇ ಸ್ಥಾನದಿಂದ 6 ನೇ ಸ್ಥಾನಕ್ಕೆ ಜಿಗಿದಿದೆ. ಸಿಎಸ್‌ಕೆ ಒಂಭತ್ತನೇ ಸ್ಥಾನದಲ್ಲೇ ಉಳಿದಿದೆ.

ಪಂಜಾಬ್ ಕಿಂಗ್ಸ್ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿತು. ನಾಯಕ ಮಯಾಂಕ್ ಅಗರ್ವಾಲ್ ಕೇವಲ 18 ರನ್‌ಗಳಿಗೆ ಮಹೀಶ್ ತೀಕ್ಷಣಗೆ ವಿಕೆಟ್ ಒಪ್ಪಿಸುವ ಮೂಲಕ ಎಡವಿದ್ರು. ಆದ್ರೆ ನಂತರ ತಂಡದ ಶಿಖರ್ ಧವನ್ ಅವರ ಭರ್ಜರಿ ಬ್ಯಾಟಿಂಗ್ ಮಾಡಿದರು.

ಶಿಖರ್ ಧವನ್ 59 ಎಸೆತಗಳಲ್ಲಿ ಔಟಾಗದೆ 88ರನ್ 9 ಬೌಂಡರಿ 2 ಸಿಕ್ಸರ್ ಸಮೇತವಾಗಿ ಪಂಜಾಬ್ ಬೃಹತ್ ಮೊತ್ತ ದಾಖಲಿಸಲು ನೆರವಾದರು. ಧವನ್ ಬ್ಯಾಟಿಂಗ್ ಫಲವಾಗಿ 4 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು.

ನಂತರ ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭದಲ್ಲೇ ಓಪನರ್ ರಾಬಿನ್ ಉತ್ತಪ್ಪ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರ 6 ವಿಕೆಟ್ ನಷ್ಟಕ್ಕೆ 176 ರನ್ ಮಾಡಿತು.

ಧೋನಿ ಮುಂಬೈ ವಿರುದ್ಧ ಕೊನೆಯ ಓವರ್ ನಲ್ಲಿ ಆಡಿದಂತೆ ಆಡಿ ತಂಡಕ್ಕೆ ಗೆಲುವು ತಂದುಕೊಡುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ 12 ರನ್‌ ಕಲೆಹಾಕಿದ ಧೋನಿ ಕೊನೆಯ ಓವರ್‌ನಲ್ಲಿ ಎಲ್ಲರ ನಿರೀಕ್ಷೆ ಹುಸಿಗೊಳಿಸಿದರು. ಹೀಗಾಗಿ 11 ರನ್ ನಿಂದ ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯದಲ್ಲಿ ಸೋತಿತು.

ಇದನ್ನು ಒದಿ‌ : https://cnewstv.in/?p=9569

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*